ಡಿವಿಜಿ ಸುದ್ದಿ, ದಾವಣಗೆರೆ: ಸರ್ಕಾರದ ಆದೇಶದಂತೆ ಮೇ 21 ರಿಂದ ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಉದ್ಯಾನವನಗಳು ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ಹಾಗೂ ಸಂಜೆ 4 ರಿಂದ 7 ಗಂಟೆಯವರೆಗೆ ತೆರೆಯಲಾಗುತ್ತಿದೆ.

ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಉದ್ಯಾನವನಗಳಲ್ಲಿ ವಾಕಿಂಗ್ ಮಾತ್ರ ಮಾಡಲು ಅವಕಾಶ ನೀಡಲಾಗಿದೆ. ಉದ್ಯಾನವನಗಳಲ್ಲಿನ ಜಿಮ್ ಬಳಸಲು ಅವಕಾಶವಿರುವುದಿಲ್ಲವೆಂದು ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
		 
		 
		 
		 
		

