ಡಿವಿಜಿ ಸುದ್ದಿ, ದಾವಣಗೆರೆ : ಕೆ.ಪಿ.ಸಿ.ಸಿ.ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಕೆಪಿವೈಸಿಸಿ ವತಿಯಿಂದ ನಡೆಸಲಾಯಿತು.
ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಉಸ್ತುವಾರಿ ಕುಮಾರಿ ಭವ್ಯಾ , ಕೆಪಿಸಿಸಿ ಜಿಲ್ಲಾಧ್ಯಕ್ಷ ಮಂಜಪ್ಪ .ಎಚ್. ಬಿ, ರಾಜ್ಯ ಕಾರ್ಯದರ್ಶಿ ನವೀನ್ ಕುಮಾರ್, ಕೆಪಿಸಿಸಿ ವಕ್ತಾರರು ಡಿ ಬಸವರಾಜ್, ಇಬ್ರಾಹಿಂ ಕಲೀಲ್ ಉಲ್ಲಾ, ಜೆ.ಜೆ.ಮೈನುದ್ದೀನ್ , ಮಹಮ್ಮದ್ ಜಾಫರ್ ಭಾಗಿಯಾಗಿದ್ದರು.
ಜಿಲ್ಲಾ ಯುವ ಕಾಂಗ್ರೆಸ್ , ಜಿಲ್ಲಾ ಸಮಿತಿ, ತಾಲ್ಲೂಕು ಸಮಿತಿ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಡಿಕೆ ಶಿವಕುಮಾರ್ ಅವರ
ಪ್ರಮಾಣವಚನ ಕಾರ್ಯದ ರೂಪರೇಷೆಗಳನ್ನು ಕಾರ್ಯಕರ್ತರಿಗೆ ತಿಳಿಸಿದರು. ವಾರ್ಡ್ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಹಾಗೂ ಬೂತ್ ಮಟ್ಟದಲ್ಲಿ ಪ್ರಮಾಣ ವಚನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಾರ್ಯಕರ್ತರಿಗೆ ತಿಳಿಸಲಾಯಿತು ಎಂದು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸಾಗರ್.ಎಲ್.ಹೆಚ್ ತಿಳಿಸಿದರು.



