ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರ ಚುನಾವಣೆ ನಾಳೆ (ಜೂ.11) ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಜೂನ್ 11 ರಂದು ಬೆಳಿಗ್ಗೆ 9.30 ರಿಂದ 10 ರವರೆಗೆ ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಮಧ್ಯಾಹ್ನ 12.30 ರಿಂದ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮಾ ಬಸಂತಪ್ಪ ತಿಳಿಸಿದ್ದಾರೆ.



