ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಮತ್ತೆ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಬರೋಬ್ಬರಿ 191 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2619ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ ಕೊರೊನಾದಿಂದ ಗುಣಮುಖರಾದ 93 ಮಂದಿ ಡಿಸ್ಚಾರ್ಜ್ ಆಗಿದ್ದು, ಇದರೊಂದಿಗೆ ಜಿಲ್ಲೆಯಲ್ಲೊ ಒಟ್ಟು 1654 ಮಂದಿ ಕೊರೊನಾದಿಂದ ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು. ಇಂದು ಕೂಡ 5 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಮೃತರ ಸಂಖ್ಯೆ 62ಕ್ಕೆಏರಿಕೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಇನ್ನು 903 ಸಕ್ರಿಯ ಪ್ರಕರಣಗಳಿವೆ.
ನಿನ್ನೆಯಷ್ಟೇ 41 ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗುವ ಲಕ್ಷಣ ಕಾಣಿಸಿತ್ತು. ಆದರೆ, ಇಂದು ಮತ್ತೆ 191 ಪಾಸಿಟಿವ್ ಪ್ರಕರಣಗಳು ದಾಖಲಾಗಿ ಜಿಲ್ಲೆ ಜನರಲ್ಲಿ ಆತಂಕ ಹೆಚ್ಚುವಂತೆ ಮಾಡಿದೆ.



