ಡಿವಿಜಿ ಸುದ್ದಿ, ದಾವಣಗೆರೆ: ಪ್ರತಿ ತಿಂಗಳು ಪೌರ ಕಾರ್ಮಿಕರ ಕುಂದುಕೊರತೆ ಆಲಿಸಲು ಸಭೆ ನಡೆಸಲಾಗುವುದು ಎಂದು ಮೇಯರ್ ಅಜಯ್ ಕುಮಾರ್ ಹೇಳಿದರು.
ಪಾಲಿಕೆ ಸಭಾಂಗಣದಲ್ಲಿ ಪೌರಕಾರ್ಮಿಕ ಸಂಘದೊಂದಿಗೆ ಸಭೆ ನಡೆಸಿದ ಅವರು, ರಾಜ್ಯದ ಯಾವ ಮಹಾನಗರ ಪಾಲಿಕೆಯಲ್ಲಿಯೂ ಪೌರ ಕಾರ್ಮಿಕರ ಕುಂದುಕೊರತೆ ಆಲಿಸುವ ಸಭೆ ನಡೆಸಲಾಗುವುದಿಲ್ಲ. ರಾಜ್ಯದಲ್ಲಿ ಮೊದಲ ಬಾರಿಗೆ ದಾವಣಗೆರೆಯಲ್ಲಿ ಪೌರಕಾರ್ಮಿಕ ಸಮಸ್ಯೆ ಆಲಿಸಲು ಪ್ರತಿ ತಿಂಗಳು ಸಭೆ ನಡೆಸಲಾಗುವುದು ಎಂದು ತಿಳಸಿದರು.
ಸಭೆಯಲ್ಲಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಮ್ಮ, ಉಪ ಮೇಯರ್ ಸೌಮ್ಯ ನರೇಂದ್ರಕುಮಾರ್, ನಗರ ಯೋಜನಾ ಸ್ಥಾಯಿ ಸಮಿತಿ ಅಧ್ಯಕ್ಷರು ವೀರೇಶ್, ಕರ್ನಾಟಕ ರಾಜ್ಯ ಪೌರಕಾರ್ಮಿಕರ ಸಂಘದ ರಾಜ್ಯ ಉಪಾಧ್ಯಕ್ಷ ಎಲ್.ಎಮ್ ಹನುಮಂತಪ್ಪ, ಮಹಾನಗರ ಪಾಲಿಕೆ ಸದಸ್ಯರು ಎಲ್.ಡಿ. ಗೋಣೆಪ್ಪ, ಸೋಗಿ ಶಾಂತಕುಮಾರ್ ಸಂಘದ ಉಪಾಧ್ಯಕ್ಷ ಸಾಗರ್ ಎಲ್ ಎಚ್, ಮಹಾನಗರ ಪಾಲಿಕೆ ಆಯುಕ್ತರು, ಆರೋಗ್ಯ ಇಲಾಖೆಯ ಡಾ ಸಂತೋಷ್, ಕುಮಾರ್ ಜಗದೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



