ಡಿವಿಜಿ ಸುದ್ದಿ, ದಾವಣಗೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ದಾವಣಗೆರೆ ತಾಲ್ಲೂಕಿನ ಅಣಜಿ ಗ್ರಾಮದಲ್ಲಿರುವ ಶ್ರೀ ಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 02 ಲಕ್ಷ ರೂಪಾಯಿ ಧನಸಹಾಯ ನೀಡಿದರು.
ಸಂಸ್ಥೆಯ ದಾವಣಗೆರೆ ಜಿಲ್ಲಾ ನಿರ್ದೇಶಕ ಜಯಂತ್ ದೇವಸ್ಥಾನದ ಸಮಿತಿಗೆ ಚಕ್ ವಿತರಣೆ ಮಾಡಿದರು. ಈ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ತರಬೇತಿ ಪಡೆದು ಮಹಿಳೆಯರು ತಯಾರಿಸಿದ ಸಿರಿ ಧಾನ್ಯ ಉತ್ಪನ್ನಗಳ ಮಳಿಗೆಯನ್ನು ಉದ್ಘಾಟನೆ ಮಾಡಿದರು.
ನಂತರ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಭಿವೃದ್ಧಿ ಸಂಸ್ಥೆಯು ಹಳೆಯ ದೇವಸ್ಥಾನಗಳ ಜೀರ್ಣೋದ್ಧಾರ, ಮಹಿಳೆಯರಿಗೆ ಸ್ವಸಹಾಯ ಸಂಘಗಳ ಮೂಲಕ ಹಲವಾರು ತರಬೇತಿ ನೀಡುವುದು, ದೇಶಿ ಉತ್ಪನ್ನಗಳ ತಯಾರಿಸಿ ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವುದು. ಸ್ವಂತ ವ್ಯವಹಾರ ಮಾಡುವ ಹಲವಾರು ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲವನ್ನು ನೀಡಿ ಆರ್ಥಿಕ ಸ್ವಾವಲಂಬಿಯಾಗಲು ಸಹಕಾರ ನೀಡಿದೆ ಎಂದು ತಿಳಿಸಿದರು .
ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಯೋಜನಾಧಿಕಾರಿಯಾದ ಬಾಬು ಮೇಲ್ವಿಚಾರಕ ಉದಯ್, ದೇವಸ್ಥಾನ ಸಮಿತಿಯ ಅಧ್ಯಕ್ಷ ವೀರಯ್ಯ, ಗ್ರಾಮಸ್ಥ ಮಲ್ಲಿಕಾರ್ಜುನ, ಸುಭಾಷ್ , ಹೊನ್ನಪ್ಪ, ಬಸವಲಿಂಗಪ್ಪ ರೇವಣಸಿದ್ದಪ್ಪ, ಸಂಗ ಬಸಪ್ಪ, ರಾಜಪ್ಪ, ಉಪಸ್ಥಿತರಿದ್ದರು.