ಡಿವಿಜಿ ಸುದ್ದಿ, ದಾವಣಗೆರೆ: ಲಾಕ್ ಡೌನ್ ಹಿನ್ನೆಲೆ ದಾವಣಗೆರೆ ಮಹಾನಗರ ಪಾಲಿಕೆ ಮತ್ತು ಎಪಿಎಂಸಿ ಮಾರುಕಟ್ಟೆ ಸಮಿತಿ ಪ್ರತಿದಿನ ತರಕಾರಿ ಮಾರಾಟದ ದರ ನಿಗದಿ ಮಾಡಲಿದೆ. ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರದಲ್ಲಿ ತರಕಾರಿ ಮಾರಾಟ ಮಾಡಿದ್ದಲ್ಲಿ, ಅಂತಹ ತರಕಾರಿಗಳನ್ನು ಸೀಜ್ ಮಾಡಿ ವಶಪಡಿಸಿಕೊಂಡು ಬಡವರಿಗೆ ಹಂಚಲಾಗುವುದು ಎಂದು ಮೇಯರ್ ಬಿ.ಜಿ. ಅಜಯ್ ಕುಮಾರ್ ಹೇಳಿದರು.
ತರಕಾರಿಗಳನ್ನು ಅಧಿಕ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತದೆ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ದಾವಣಗೆರೆ ಎಂಪಿಎಂಸಿ ಮಾರುಕಟ್ಟೆ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳು ಸೇರಿಕೊಂಡು ತರಕಾರಿಗಳ ದರ ನಿಗದಿ ಮಾಡಲಿದ್ದಾರೆ. ಇದು ಪ್ರತಿ ದಿನ ತರಕಾರಿ ದರದಲ್ಲಿ ಬದಲಾವಣೆ ಆಗಲಿದೆ. ಈ ದರ ಪಟ್ಟಿಯನ್ನು ಎಲ್ಲ ಸಾರ್ವಜನಿಕ ಸ್ಥಳದಲ್ಲಿ ಕಡೆ ಅಂಟಿಸಲಾಗುವುದು. ತರಕಾರಿ ಮಾರಾಟ ಮಾಡುವ ಪ್ರತಿಯೊಬ್ಬರು ಈ ದರ ಪಟ್ಟಿ ಇಟ್ಟುಕೊಂಡಿರಬೇಕು. ನಿಗದಿಪಡಿಸಿದ ದರಕ್ಕಿಂತ ಒಂದು ರೂಪಾಯಿ ಹೆಚ್ಚು ಮಾರುವಂತಿಲ್ಲ ಎಚ್ಚರಿಕೆ ನೀಡಿದರು.

ತರಕಾರಿ ಮಾರಾಟಗಾರ ದರ ಪಟ್ಟಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರೆ, ಗ್ರಾಹಕರು ಕೂಡಲೇ ಪಾಲಿಕೆ ಅಧಿಕಾರಿಗಳಿಗೆ ದೂರು ನೀಡಬಹುದು. ಈ ದೂರಿ ಅನ್ವಯ ತರಕಾರಿ ವಶಪಡಿಸಿಕೊಂಡು ಬಡವರಿಗೆ ಹಂಚಲಾಗುವುದು. ಗ್ರಾಹಕರು ತಮ್ಮ ದೂರು ನೀಡಲು ಟೋಲ್ ಫ್ರೀ ನಂಬರ್ 1077 ನಂಬರ್ ಗೆ ಕರೆ ಮಾಡಬಹುದು ಎಂದರು.
ಇನ್ನು ಮಾಂಸದ ಬೆಲೆಯನ್ನು 500 ರೂಪಾಯಿ ನಿಗದಿ ಮಾಡಲಾಗಿದೆ. ಈ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹ ಅಂಗಡಿ ಪರವಾನಿಗೆ ರದ್ದುಪಡಿಸಲಾಗುವುದು. ಎಲ್ಲ ವ್ಯಾಪರಸ್ಥರು ಸಂಕಷ್ಟ ಪರಿಸ್ಥಿತಿಯಲ್ಲಿ ಹೆಚ್ಚಿನ ಲಾಭಕ್ಕಾಗಿ ಮಾರಾಟ ಮಾಡದೆ, ಪರಿಸ್ಥಿತಿಗೆ ಹೊಂದಿಕೊಂಡು ಮಾರಾಟ ಮಾಡಬೇಕಾಗಿ ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ ಎಂದರು.
ವಾಟ್ಸಾಪ್ : 7483892205
ಇಮೇಲ್: dvgsuddi@gmail.com



