ಡಿವಿಜಿ ಸುದ್ದಿ, ದಾವಣಗೆರೆ : ಸರ್ಕಾರದ ವತಿಯಿಂದ ನೀರು ನಿರ್ವಹಣೆ ಸದ್ಬಳಕೆಗೆ “ತುಂತುರು ನೀರಾವರಿ ಘಟಕಗಳು” ಸ್ಥಾಪಿಸಲು ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರಿಗೆ ಶೇ.90ರಷ್ಟು ರಿಯಾಯಿತಿಯಲ್ಲಿ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಿದೆ.
ಅಗತ್ಯ ದಾಖಲಾತಿಗಳಾದ 2 .5 ಎಕರೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಎರಡು ಪಾಸ್‍ಪೋರ್ಟ್ ಸೈಜ್ ಫೋಟೋ, ರೂ.20 ಚಾಪಾ ಕಾಗದದಲ್ಲಿ ಮುಚ್ಚಳಿಕೆ ಪತ್ರ, ನೀರಿನ ಹಕ್ಕಿನ ಪತ್ರ, ಬೆಳೆ ದೃಢೀಕರಣ ಪತ್ರದೊಂದಿಗೆ ಅರ್ಜಿಯೊಂದಿಗೆ ಸಲ್ಲಸಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಈ ಸೌಲಭ್ಯದ ಕುರಿತು ಮಾಹಿತಿ ಪಡೆಯಬಹುದೆಂದು ದಾವಣಗೆರೆ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಬಾರಿಯ ಮುಂಗಾರಿನಲ್ಲಿ ನಿರೀಕ್ಷೆಗಿಂತ ಉತ್ತಮ ಮಳೆಯಾಗಿದ್ದು, ದಾವಣಗೆರೆ ತಾಲ್ಲೂಕಿನಾದ್ಯಂತ ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆ 342 ಮಿ.ಮೀಟರ್ ಗಿಂತ ವಾಸ್ತವ 482 ಮಿ.ಮೀ. ಮಳೆಯಾಗಿದೆ. ತಾಲ್ಲೂಕಿನಾದ್ಯಂತ 46 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ, ತೊಗರಿ, ರಾಗಿ, ಕಬ್ಬು, ಭತ್ತ ಹಾಗೂ ಇತರೆ ಬೆಳೆಗಳು ಬಿತ್ತನೆಯಾಗಿದ್ದು, ಎಲ್ಲಾ ಬೆಳೆಗಳೂ ಸಹ ಉತ್ತಮವಾಗಿ ಬೆಳೆದು ಮುಂಬರುವ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗೆ ಬಿತ್ತನೆ ವಿಸ್ತೀರ್ಣ ಗುರಿಗೆ ತಕ್ಕಂತೆ ವಿಸ್ತರಣೆಯಾಗುವ ನಿರೀಕ್ಷೆಯಿದೆ.



