Connect with us

Dvgsuddi Kannada | online news portal | Kannada news online

ಜನಸ್ಪಂದನಕ್ಕೆ  ಅರ್ಜಿಗಳ ಮಹಾಪೂರ: ಮತ ಚಲಾಯಿಸಿ ನಿಮ್ಮ ಹಕ್ಕು ಕೇಳಿ; ಜಿಲ್ಲಾಧಿಕಾರಿ ಮಹಾಂತೇಶ್  ಬೀಳಗಿ

ದಾವಣಗೆರೆ

ಜನಸ್ಪಂದನಕ್ಕೆ  ಅರ್ಜಿಗಳ ಮಹಾಪೂರ: ಮತ ಚಲಾಯಿಸಿ ನಿಮ್ಮ ಹಕ್ಕು ಕೇಳಿ; ಜಿಲ್ಲಾಧಿಕಾರಿ ಮಹಾಂತೇಶ್  ಬೀಳಗಿ

ಡಿವಿಜಿ ಸದ್ದಿ, ದಾವಣಗೆರೆ: ನಮ್ಮ ವಾರ್ಡ್ ನಲ್ಲಿ ಸೂಕ್ತ ಮೂಲ ಸೌಕರ್ಯವಿಲ್ಲವೆಂದು ಮತದಾನ ಮಾಡದಿರುವುದು ಸರಿಯಲ್ಲ. ಚುನಾವಣೆ ಸಂದರ್ಭದಲ್ಲಿ ಸೂಕ್ತ ಅಭ್ಯರ್ಥಿಗೆ ಮತ ಹಾಕುವ ಮೂಲಕ ನಿಮ್ಮ ವಾರ್ಡ್ ಸಮಸ್ಯೆಗಳಿಗೆ ನೀವೇ ಪರಿಹಾರ ಕಂಡಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ಬೀಳಗಿ ಸಲಹೆ ನೀಡಿದರು.

ಸೋಮವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಜನಸ್ಪಂದನದಲ್ಲಿ ಜನರ ಅವಹಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ತಮ್ಮ ವಾರ್ಡ್ ಸಮಸ್ಯೆಗಳ ಬಗ್ಗೆ ದೂರು ನೀಡಲು ಆಗಮಿಸಿದ್ದ ಮಹಿಳಾ ವಕೀಲರೊಬ್ಬರಿಗೆ ನೀವು ಈ ಬಾರಿಯ ಪಾಲಿಕೆ ಚುನಾವಣೆಯಲ್ಲಿ ಮತದಾನ ಮಾಡಿದ್ದೀರಾ ಎಂದು ಕೇಳಿದರು. ಅದಕ್ಕೆ  ಆ ಮಹಿಳೆ ಇಲ್ಲ  ಎಂದಾಗ ಜಿಲ್ಲಾಧಿರಿಗಳು, ನಾಗರಿಕರಾಗಿ ಮತದಾನ ಮಾಡಬೇಕಿರುವುದು ನಮ್ಮ ಮುಖ್ಯ ಕರ್ತವ್ಯ. ಮತದಾನ ನಮ್ಮ ಹಕ್ಕು ಅದನ್ನು ಸರಿಯಾಗಿ ಬಳಸಿಕೊಂಡು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ ಎಂದರು.

ದೇವರಾಜ್ ಅರಸ್ ಬಡಾವಣೆಯ ನಿವಾಸಿಯೊಬ್ಬರು ಮಹಿಳಾ ವಕೀಲೆ,  ಕೋರ್ಟ್‍ನ ಹಿಂಭಾಗ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ಸ್ವಚ್ಚತೆ ಇಲ್ಲ. ಇದರಿಂದ ನಿವಾಸಿಗಳಿಗೆ  ತೊಂದರೆಯಾಗುತ್ತಿದ್ದು, ರಿಂಗ್ ರಸ್ತೆ ಮತ್ತು ಕೋರ್ಟ್ ಹಿಂಭಾಗದ ರಸ್ತೆಗಳಲ್ಲಿ ಓಡಾಡಲು ಸಾರ್ವಜನಿಕರಿಗೆ ಭಯದ ವಾತವರಣವಿದೆ. ಇದರ ಬಗ್ಗೆ ಮಹಾನಗರಪಾಲಿಕೆ ಹಲವಾರು ಬಾರಿ ದೂರು ನೀಡಿದ್ದರು ಯಾವುದೇ ಪ್ರಯೋಜನವಾಗಿಲ್ಲವೆಂದು ದೂರಿದರು. ನಗರದ ಅನೇಕ ಸ್ಥಳಗಳಲ್ಲಿ ಇದೇ ರೀತಿಯ ಸಮಸ್ಯೆಗಳಿದ್ದು, ಅದರ ಬಗ್ಗೆ ಗಮನ ಹರಿಸಿ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಮಹಾನಗರಪಾಲಿಕೆ ಆಯುಕ್ತರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಲಕ್ಷೀ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಹಿರಿಯ ನಾಗರಿಕ ಠೇವಣಿ ಯೋಜನೆಯಡಿ ಒಂದು ಲಕ್ಷ  ಹಣವನ್ನು ಠೇವಣಿ ಹಿಡಲಾಗಿತ್ತು. ನಮ್ಮ ಠೇವಣಿ ಅವಧಿ ಮುಗಿದು, ಬಾಂಡ್ ಮೆಚ್ಯುರಿಟಿ ಆಗಿದ್ದರು ನಮಗೆ ಹಣ ನೀಡದೇ ಸತಾಯಿಸುತ್ತಿದ್ದಾರೆ ಎಂದು ಸುನಂದ ಎಂಬುವರು  ದೂರು ನೀಡಿದರು.

ಈ ಬಗ್ಗೆ ಸೊಸೈಟಿಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಒಟ್ಟು 1,200  ಜನರಿಗೆ ಇದೇ ರೀತಿ ಮೋಸವಾಗಿದೆ.  ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗೆ ನೋಟಿಸ್ ನೀಡಲಾಗಿದ್ದು, ಆ ವ್ಯಕ್ತಿ 15 ದಿನಗಳಿಂದ ಕಚೇರಿಗೆ ಬಂದಿಲ್ಲ. ಇದಕ್ಕೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪುಷ್ಪ ಮಹಾಲಿಂಗಪ್ಪ ಶಾಲೆ ಜಾಗ ಎಷ್ಟಿದೆ ಎಂಬುದು ತಿಳಿದಿಲ್ಲ. ಶಾಲೆಯ ಸುತ್ತ ಮುತ್ತ ದೊಡ್ಡ ಬಿಲ್ಡಂಗ್ ಅನುಮತಿಯಿಲ್ಲದೇ ನಿರ್ಮಾಣವಾಗುತ್ತಿವೆ. ಇದರ ಬಗ್ಗೆ ಜಿಲ್ಲಾಧಿಕಾರಿಗಳು ತನಿಖೆ ನಡೆಸಸಬೇಕೆಂದು  ಮಲ್ಲಿಕಾರ್ಜಿನ್ ಇಂಗಳೇಶ್ವರ ಎಂಬುವರು ದೂರು  ಸಲ್ಲಿಸಿದರು.

ವಾಕ್  ಮತ್ತು ಶ್ರವಣ ದೋಷವುಳ್ಳ ಅನೇಕ ಜನ ವಿಕಲಚೇತನರು ನಮಗೆ ಸ್ವಯಂ ಉದ್ಯೋಗ ಯೋಜನೆಯಡಿ ಸಾಲ ಸೌಲಭ್ಯಗಳನ್ನು ಒದಗಿಸಿಕೊಡಿ ಎಂದು ಮನವಿ ಮಾಡಿದರು.ನಿಮಗೆ ಅವಶ್ಯವಿರುವ ಸಹಾಯ ಮಾಡಲು ನಾನು ಸಿದ್ಧನಿದ್ದೆ, ನಿಮ್ಮ ಅನುಕೂಲಕ್ಕಾಗಿ ಸಂಬಂಧಿಸಿದ ಎಲ್ಲ ಇಲಾಖೆಗಳ ಸಮ್ಮಖದಲ್ಲಿ ಸಭೆ ನಡೆಸಿ ಅಗತ್ಯವಾದ ಸಹಾಯ ವ ಮಾಡಲಾಗುವುದೆಂದು  ಜಿಲ್ಲಾಧಿಕಾರಿ ತಿಳಿಸಿದರು.

dc2 dvgsuddi

ಆಯಾ ಇಲಾಖೆ  ಸಂಬಂಧಿಸಿದ ಸಮಸ್ಯೆಗಳನ್ನು ಅಲ್ಲೇ ಬಗೆಹರಿಸಿದರೆ, ಜನರು ಜಿಲ್ಲಾಡಳಿತ ಕಚೇರಿಗೆ ಬರಲು ಅವಕಾಶವಿರುವುದಿಲ್ಲ. ಇಲ್ಲಿರುವ ಎಲ್ಲಾ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಿ ಎಂದು ಹೇಳಿದರು.

ಕಾನೂನುನ್ನು ಹೊರತು ಪಡಿಸಿ ಸಾರ್ವಜನಿಕರ ಕಾಳಜಿ ವಹಿಸಿ ಕೆಲಸ ಮಾಡಬೇಕು. ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಅಧಿಕಾರಿಗಳು ನಡೆದುಕೊಳ್ಳುವ ರೀತಿಯಿಂದ ನಮ್ಮ ಕಚೇರಿಯ ವರ್ಚಸ್ಸುನ್ನು ಹೆಚ್ಚಿಸುತ್ತದೆ. ಆದ್ದರಿಂದ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಪ್ರೀತಿ ಮತ್ತು ಕಾಳಜಿಯಿಂದ ವರ್ತಿಸುವ ಗುಣ ಬೆಳೆಸಿಕೊಳ್ಳಿ. ಸಾರ್ವಜನಿಕರ ಮನವಿಯನ್ನು ಆಲಿಸಿಕೊಂಡು ಅವರ ಸಮಸ್ಯಗೆ ಪರಿಹಾರ ಒದಗಿಸುವ ಕಾರ್ಯವಾಗಬೇಕೆ ಎಂದು ತಿಳಿಸಿದರು.

ಸಭೆಯಲ್ಲಿ ವೃದ್ದಾಪ್ಯ ವೇತನ, ವಿಧವಾ ವೇತನ, ಖಾತೆ ವರ್ಗಾವಣೆ, ಬಸ್ ವ್ಯವಸ್ಥೆ ಕಲ್ಪಿಸುವ ಕುರಿತು, ಸಾಲ ಸೌಲಭ್ಯಗಳ ಕುರಿತು ಹಾಗೂ ಅಂಗವಿಕಲರಿಗೆ ಸ್ವಉದ್ಯೋಗಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅನೇಕ ಅಹವಾಲುಗಳನ್ನು ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದಪ್ಪ, ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್ ವಿಜಯ್‍ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top