ಡಿವಿಜಿ ಸುದ್ದಿ, ಬೆಂಗಳೂರು: ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಆನ್‌ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ತರಗತಿ ಆರಂಭವಾಗಲಿವೆ. ಅಕ್ಟೋಬರ್‌ನಿಂದ ಆಫ್‌ಲೈನ್ ತರಗತಿಗಳು ಕಾರ್ಯಾರಂಭಗೊಳ್ಳಲಿವೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ನೇರವಾಗಿ ತರಗತಿ ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ ಕೆಲ ಪದವಿ ಪರೀಕ್ಷೆಗಳು ನಡೆಯಲಿವೆ. ಆದ್ದರಿಂದ ಸರಕಾರ ಮುಂದಿನ ತಿಂಗಳಿಂದ ಆನ್‌ಲೈನ್ ಕಾಲೇಜು ಆರಂಭಕ್ಕೆ ಚಾಲನೆ ನೀಡಲಾಗುವುದು. ಅಕ್ಟೋಬರ್ ತಿಂಗಳಿಂದ ನೇರವಾಗಿ ಕಾಲೇಜು ಆರಂಭಿಸಲಾಗುವುದು ಎಂದರು.
ತರಗತಿ ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ. ಕೇಂದ್ರ ಸರಕಾರದ ಆದೇಶ ಬಂದ ಕೂಡಲೇ ಕಾರ್ಯಾರಂಭ ಮಾಡಲಾಗುವುದು ಎಂದು ತಿಳಿಸಿದರು.



