Connect with us

Dvg Suddi-Kannada News

ಕೊರೊನಾ ಶಂಕಿತ ವ್ಯಕ್ತಿ ಆಸ್ಪತ್ರೆ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಪ್ರಮುಖ ಸುದ್ದಿ

ಕೊರೊನಾ ಶಂಕಿತ ವ್ಯಕ್ತಿ ಆಸ್ಪತ್ರೆ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ನವದೆಹಲಿ: ಕೊರೊನಾ ವೈರಸ್ ಶಂಕಿತ ವ್ಯಕ್ತಿ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ನಡೆದಿದೆ.

ಸಾವನ್ನಪ್ಪಿದ ವ್ಯಕ್ತಿಯನ್ನು ಪಂಜಾಬ್ ಮೂಲದ ತನ್ವೀರ್ ಸಿಂಗ್  ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ  ಆಸ್ಟ್ರೇಲಿಯಾದ ಸಿಡ್ನಿಯಿಂದ ಹಿಂದಿರುಗಿದ್ದ. ಈತನನ್ನು  ಕೊರೊನಾ ಪರೀಕ್ಷೆಗಾಗಿ ದೆಹಲಿಯ ಸಫ್ದರ್‍ಜಂಗ್ ಆಸ್ಪತ್ರೆಯ ಎಸ್‍ಎಸ್‍ಬಿ ಕಟ್ಟಡಕ್ಕೆ ಕರೆತರಲಾಗಿತ್ತು. ರಾತ್ರಿ 9 ಗಂಟೆಗೆ ವೇಳೆಗೆ ಎಸ್‍ಎಸ್‍ಬಿ ಕಟ್ಟಡ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಕೊಂಡಿದ್ದಾನೆ.

ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಆತನ ಗಂಟಲಿನ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬರುವುದನ್ನು ಕಾಯುತ್ತಿದ್ದೆವು. ಅಷ್ಟರಲ್ಲೇ ರೋಗಿ ಎಸ್‍ಎಸ್‍ಬಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಂದು ಆಸ್ಪತ್ರೆ ಆಡಳಿತ ಮಂಡಳಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದಲ್ಲಿ ಕೊರೊನಾ ವೈರಸ್‍ನಿಂದಾಗಿ 3ಜನ ಸಾವನ್ನಪ್ಪಿದ್ದು, 151 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top