ಮಧ್ಯಪ್ರದೇಶ ಸರ್ಕಾರ ಬಿಕ್ಕಟ್ಟು; ಬಂಡಾಯ ಶಾಸಕರ ಹೋಟೆಲ್ ಗೆ ನುಗ್ಗಲು ಯತ್ನಿಸಿದ ದಿಗ್ವಿಜಯ ಸಿಂಗ್ ಬಂಧನ

ಡಿವಿಜಿ ಸುದ್ದಿ, ಬೆಂಗಳೂರು: ಮಧ್ಯಪ್ರದೇಶ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಬೀಳುವ ಸ್ಥಿತಿಗೆ ಬಂದು ನಿಲ್ಲಿಸಿದ  ಕಾಂಗ್ರೆಸ್‌ ಬಂಡಾಯ ಶಾಸಕರು ತಂಗಿದ್ದ  ಬೆಂಗಳೂರಿನ ಹೋಟೆಲ್ ಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ ಸಿಂಗ್ ಅವರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದ್ದಾರೆ.

ಮುಂಜಾನೆ ಯಲಹಂಕದ ರಮಡ ಹೊಟೇಲ್‌ಗೆ ನುಗ್ಗಲು ಯತ್ನಿಸಿದ ದಿಗ್ವಿಜಯ್‌ ಸಿಂಗ್‌ ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದರು. ಮುಖ್ಯಮಂತ್ರಿ ಕಮಲ್‌ನಾಥ್‌ ವಿರುದ್ಧ ತಿರುಗಿ ಬಿದ್ದಿರುವ 22 ಶಾಸಕರು ಕಾಂಗ್ರೆಸ್‌ ತ್ಯಜಿಸಿದ್ದಾರೆ.  ಯುವ ನಾಯಕ ಜ್ಯೋತಿರಾದಿತ್ಯ ಸಿಂದಿಯಾ ರಾಜೀನಾಮೆ ನೀಡಿದ ಬೆನ್ನಲ್ಲೇ ಬಂಡಾಯ 22 ಶಾಸಕರು ರಾಜೀನಾಮೆ ನೀಡಿದ್ದು, ಇವರೆಲ್ಲ  ಬಿಜೆಪಿಗೆ ಸೇರಲು ಸಿದ್ಧತೆ ನಡೆಸಿದ್ದಾರೆ.

ದಿಗ್ವಿಜಯ್‌ ಸಿಂಗ್‌ ಹಾಗೂ ಮಧ್ಯಪ್ರದೇಶ ಸರ್ಕಾರದ ಕೆಲವು ಸಚಿವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಜತೆಗೂಡಿ ನೇರವಾಗಿ ಬಂಡಾಯ ಶಾಸಕರು ತಂಗಿರುವ ರಮಡ ಹೊಟೇಲ್‌ಗೆ ತೆರಳಲು ಮುಂದಾದರು.  ಆದರೆ, ದಾರಿಯಲ್ಲೇ ಪೊಲೀಸರು ತಡೆದು ಬಂಧಿಸಿದರು.

ಭಾರೀ ಸಂಖ್ಯೆಯಲ್ಲಿದ್ದ ಕಾಂಗ್ರೆಸ್‌ ಕಾರ್ಯಕರ್ತರು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ  ಕೃಷ್ಣ ಬೈರೇಗೌಡ, ರಿಜ್ಷಾನ್‌ ಅರ್ಷದ್‌, ಎನ್‌.ಎ. ಹ್ಯಾರಿಸ್‌ ಮತ್ತಿತರರು ಉಪಸ್ಥಿತರಿದ್ದರು.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts