ವಿಶೇಷ ಚೇತನರಿಗೆ ಆತ್ಮವಿಶ್ವಾಸ ಅಗತ್ಯ: ಯಶೋಧಮ್ಮ ಮರುಳಸಿದ್ದಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ದಾವಣಗೆರೆ: ದಿವ್ಯಾಂಗರು ಸರ್ವಾಂಗರಿಗಿಂತ ಎಲ್ಲ ವಿಷಯಗಳಲ್ಲೂ ಮಿಗಿಲಾಗಿದ್ದು, ಅವರ ಪ್ರತಿಭೆ ಗುರುತಿಸಿ  ಅವರಲ್ಲಿ ಆತ್ಮವಿಶ್ವಾಸ ತುಂಬುವ ಅವಶ್ಯಕತೆ ಇದೆ ಎಂದು ಜಿ.ಪಂ.ಅಧ್ಯಕ್ಷೆ ಯಶೋಧಮ್ಮ ಮರುಳಸಿದ್ದಪ್ಪ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಸ್ವಯಂ ಸೇವಾ ಸಂಸ್ಥೆ ಸಹಯೋಗದೊಂದಿಗೆ   ಅಭಿನವ ರೇಣುಕಾ ಮಂದಿರದಲ್ಲಿ  ಆಯೋಜಿಸಿದ್ದ  ವಿಶ್ವ ವಿಕಲಚೇತನರ ದಿನಾಚರಣೆ  ಉದ್ಘಾಟಿಸಿ ಅವರು ಮಾತನಾಡಿದರು.

zp dvgsuddi 1

ವಿಶೇಷ ಚೇತನರಿಗೆ ಆತ್ಮವಿಶ್ವಾಸದಿಂದ ಬದಕಲು ನಮ್ಮ ಸಹಕಾರ ಅಗತ್ಯವಾಗಿದೆ. ಸರ್ಕಾರ ವಿಶೇಷಚೇತನರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆ, ಸೌಲಭ್ಯಗಳನ್ನು ನೀಡಿದೆ. ಅಧಿಕಾರಿಗಳು ಅದನ್ನು ಅವರಿಗೆ ಸರಿಯಾಗಿ ತಲುಪಿಸುವ ಕೆಲಸ ಮಾಡಬೇಕು. ವಿಶೇಷ ಚೇತನರು ಎಲ್ಲ ರೀತಿಯಿಂದ ಸಮರ್ಥರಿದ್ದು ಪ್ರೀತಿ, ವಿಶ್ವಾಸದಿಂದ ಕಂಡಲ್ಲಿ ಎಲ್ಲ ರಂಗಗಳಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಸಮಯ ಮತ್ತು ಸಮುದ್ರದ ತೆರೆಗಳು ಯಾರಿಗಾಗಿಯೂ ಕಾಯುವುದಿಲ್ಲ. ನಿರಂತರವಾಗಿ ಅವು ತಮ್ಮ ಕೆಲಸವನ್ನು ಮಾಡಿಕೊಂಡು ಹೋಗುತ್ತವೆ. ಸಮಯವನ್ನು ಹಾಗೇ ವ್ಯರ್ಥವಾಗಿ ಹೋಗಲು ಬಿಡದೇ ಅದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ದೇವರ ಎಲ್ಲ ಸೃಷ್ಟಿಯಲ್ಲೂ ಒಂದೊಂದು ವಿಶೇಷತೆಯನ್ನು ನೀಡಿರುತ್ತಾನೆ. ಅದನ್ನು ತಿಳಿದು, ಅಂತಹ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಬೇಕು. ಒಂದೇ ಕಾಲಿನಲ್ಲಿ ಮೌಂಟ್‍ಎವೆರೆಸ್ಟ್ ಶಿಖರ ಏರಿ ಸಾಧನೆ ಮಾಡಿದ ಮಹಿಳೆಯರಿದ್ದಾರೆ. ಅಂತಹವರ ಸಾಧನೆಯನ್ನು ಸ್ಪೂತಿಯಾಗಿ ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿಗ ಪ್ರಭು ಎನ್.ಬಡಿಗೇರ್ ಮಾತನಾಡಿ, ಜಗತ್ತಿನ ಅದ್ಭುತ ಪ್ರತಿಭೆಗಳೆಂದರೆ ವಿಶೇಷಚೇತನರು. ಅವರು ಪ್ರತಿಭೆಗಳ ನಿಧಿಯೇ ಆಗಿದ್ದಾರೆ. ಶಾರದೆ ಅವರಿಗೆ ಒಲಿದಿದ್ದು ಎಲ್ಲ ಕ್ಷೇತ್ರಗಳಲ್ಲಿ ಅವರು ತಮ್ಮ ಪ್ರತಿಭೆಯನ್ನು ಹೊರ ಹೊಮ್ಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇವರೆಲ್ಲ ಮಿನುಗುತಾರೆಯರಾಗಬೇಕು ಎಂದು ಆಶಿಸಿದರು.

ಜಿಲ್ಲಾ  ಅಂಗವಿಕಲ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಅಧಿಕಾರಿ ಜಿ.ಎಸ್. ಶಶಿಧರ್ ಮಾತನಾಡಿ, ಜಿಲ್ಲೆಯಲ್ಲಿ  23,900 ವಿಕಲಚೇತನರಿದ್ದು, ಇಲ್ಲಿಯವರೆಗು 12,390 ವಿಕಲಚೇತನರು ಆನ್‍ಲೈನ್ ಅರ್ಜಿ ಸಲ್ಲಿಸಿದ್ದು 2,900 ಜನರು ಯು.ಡಿ.ಐ.ಡಿ ಸ್ಮಾರ್ಟ್ ಕಾರ್ಡ್ ಪಡೆದಿರುತ್ತಾರೆ. 2020 ನೇ ವರ್ಷದಿಂದ ಕೈಬರಹದ ಗುರುತಿನ ಚೀಟಿಗಳು ರದ್ದುಗೊಳ್ಳುತ್ತವೆ. ಆದ್ದರಿಂದ ಎಲ್ಲರೂ ಸಹ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ಕಾರ್ಡ್‍ಗಳನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

53 ಕೆಜಿ ವಿಭಾಗದ ವೇಟ್‍ಲಿಫ್ಟಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದ ದೈಹಿಕ ವಿಕಲಚೇತನ ಸುನಿಲ್ ಕುಮಾರ್, ಸರಿಗಮಪ ಜ್ಯೂನಿಯರ್ಸ್ ಸ್ಪರ್ಧಿ ಸಂಗೀತ, ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಅಂಧರ ಶಾಲೆಯ ವಿದ್ಯಾರ್ಥಿಗಳಾದ ಜಿ.ಟಿ.ಕಿರಣ್, ಬಿ.ಎನ್.ಮಂಜುಳ ಹಾಗೂ ಅಂತರಾಷ್ಟ್ರೀಯ ಈಜುಪಟು ಮುತ್ತೇಶ್ ಹಾಗೂ ಇತರೆ ಸಾಧನೆ ಮಾಡಿದ ಮಕ್ಕಳನ್ನು ಸನ್ಮಾನಿಸಲಾಯಿತು. ಜೊತೆಗೆ ವಿಕಲಚೇತನರ ವಿಶೇಷ ಶಾಲೆಗಳಲ್ಲಿ ಕಲಿಸುತ್ತಿರುವ ಶಿಕ್ಷಕರು, ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ದುರುಗೇಶ್, ಜಯಾಬಾಯಿ, ಬಸವರಾಜ್ ಹಾಗೂ ಮಾರುತಿ, ಜಿಲ್ಲಾ ಅಂಗವಿಕಲ ಅಧಿಕಾರಿ ಜಿ.ಎಸ್.ಶಶಿಧರ್ ಇವರನ್ನು ಸನ್ಮಾನಿಸಲಾಯಿತು.ಸಾರ್ವಜನಿಕ ಶಿಕ್ಷಣ ಇಲಾಖೆ  ಆಯೋಜಿಸಿದ್ದ ಸ್ಪರ್ಧಾ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಸಭೆಯಲ್ಲಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಮಮತಾ ಮಲ್ಲೇಶಪ್ಪ, ಜಿಲ್ಲಾ ಅಂಗವಿಕಲರ ಶ್ರೇಯೋಭಿವೃದ್ಧಿ ಸಂಘದ ವೀರಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿಜಯಕುಮಾರ್, ಆಶಾಕಿರಣ ಟ್ರಸ್ಟ್‍ನ ಅಧ್ಯಕ್ಷ ರಮಣ ರಾವ್, ಸಿಆರ್‍ಸಿ ನಿರ್ದೇಶಕ ಜ್ಞಾನವೇಲ್, ಪಾಲಿಕೆಯ ಗದಿಗೇಶ್, ಸಿಡಿಪಿಓ ಧರಣೇಂದ್ರ, ಕಾನೂನು ಸಲಹೆಗಾರರಾದ ಪವಿತ್ರ, ವಿಆರ್‍ಡಬ್ಲ್ಯು, ಎಂ.ಆರ್.ಡಬ್ಲ್ಯು ಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *