ಹೈದರಾಬಾದ್: ಇಡೀ ದೇಶದಲ್ಲಿ ಸಂಚಲನ ಮೂಡಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ 4 ಆರೋಪಿಗಳನ್ನು ಇಂದು ಬೆಳಗ್ಗೆ 3 ಗಂಟೆಗೆ ಮಹಾಜರಗೆ ಕರೆದುಕೊಂಡು ಹೋಗಿದ್ದ ಸಂದರ್ಭದಲ್ಲಿ , ಕೊಲೆ ನಡೆದ ಜಾಗದಲ್ಲಿಯೇ ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ.
ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಕಾಮುಕರು ಪಶುವೈದ್ಯೆಯನ್ನು ರೇಪ್ ಮಾಡಿ, ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು. ಇದೀಗ ಕಾಮಕರು ಕೂಡ ಅದೇ ಸ್ಥಳದಲ್ಲೇ ಪೊಲೀಸರ ಫೈರಿಂಗ್ ನಲ್ಲಿ ಹತ್ಯೆಯಾಗಿದ್ದಾರೆ.
ಘಟನಾ ಸ್ಥಳದ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ.
Hyderabad: Heavy police presence at the spot where accused in the rape and murder of the woman veterinarian were killed in an encounter earlier today. #Telangana pic.twitter.com/tpIzyBgxdZ
— ANI (@ANI) December 6, 2019
Hyderabad: Senior Police officials arrive at the site of the encounter. All four accused in the rape and murder of woman veterinarian in Telangana were killed in an encounter with the police when the accused tried to escape while being taken to the crime spot. https://t.co/TB4R8EuPyr pic.twitter.com/7fuG87MP0m
— ANI (@ANI) December 6, 2019
My daughter's soul at peace now: Hyderabad veterinarian's father on encounter
Read @ANI story | https://t.co/pTLxgCcSV3 pic.twitter.com/SizszIrRw8
— ANI Digital (@ani_digital) December 6, 2019
ಪ್ರಕರಣದ ಹಿನ್ನೆಲೆ
ನವೆಂಬರ್ 27ರಂದು 26 ವರ್ಷದ ಪಶುವೈದ್ಯೆಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮೊಹಮ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು.
ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈ ಕೃತ್ಯದ ವಿಚಾರಣೆಗೆ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು.
Rekha Sharma, National Commission for Women on #Telangana encounter: We always demanded death penalty for them, and here police is the best judge, I don't know in what circumstances this happened. https://t.co/cCfPbqy3rB pic.twitter.com/mG66un7DBv
— ANI (@ANI) December 6, 2019



