Connect with us

Dvg Suddi-Kannada News

ಪಶುವೈದ್ಯೆ 4 ಅತ್ಯಾಚಾರಿಗಳು ಎನ್‍ಕೌಂಟರ್

ರಾಷ್ಟ್ರ ಸುದ್ದಿ

ಪಶುವೈದ್ಯೆ 4 ಅತ್ಯಾಚಾರಿಗಳು ಎನ್‍ಕೌಂಟರ್

ಹೈದರಾಬಾದ್: ಇಡೀ ದೇಶದಲ್ಲಿ ಸಂಚಲನ ಮೂಡಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ 4  ಆರೋಪಿಗಳನ್ನು ಇಂದು ಬೆಳಗ್ಗೆ 3 ಗಂಟೆಗೆ ಮಹಾಜರಗೆ ಕರೆದುಕೊಂಡು ಹೋಗಿದ್ದ ಸಂದರ್ಭದಲ್ಲಿ , ಕೊಲೆ ನಡೆದ ಜಾಗದಲ್ಲಿಯೇ ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ.

ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಕಾಮುಕರು ಪಶುವೈದ್ಯೆಯನ್ನು ರೇಪ್ ಮಾಡಿ, ಬೆಂಕಿ ಹಚ್ಚಿ ಸುಟ್ಟು ಹಾಕಿದ್ದರು. ಇದೀಗ ಕಾಮಕರು ಕೂಡ ಅದೇ ಸ್ಥಳದಲ್ಲೇ ಪೊಲೀಸರ ಫೈರಿಂಗ್ ನಲ್ಲಿ ಹತ್ಯೆಯಾಗಿದ್ದಾರೆ.

ಘಟನಾ ಸ್ಥಳದ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ

ನವೆಂಬರ್ 27ರಂದು 26 ವರ್ಷದ ಪಶುವೈದ್ಯೆಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮೊಹಮ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು.

ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಆರೋಪಿಗಳನ್ನು  ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈ ಕೃತ್ಯದ ವಿಚಾರಣೆಗೆ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು.

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top