ಡಿವಿಜಿ ಸುದ್ದಿ, ಬೆಂಗಳೂರು: ಡಿಜಿ ಹಳ್ಳಿ ಮತ್ತು ಕೆಜಿ ನಡೆದ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್, ಎಸ್‌ಡಿಪಿಐ ಮುಖಂಡರು ಪರಸ್ಪರ ವಾಟ್ಸಾಪ್ ಕಾಲ್ ಮೂಲಕ ಪರಸ್ಪರ ಸಂಪರ್ಕದಲ್ಲಿದ್ದರೂ ವಿಚಾರ ಬೆಳಕಿಗೆ ಬಂದಿದೆ.
ಪ್ರಕರಣ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಎಸ್‌ಡಿಪಿಐ ಸಕ್ರಿಯ ಕಾರ್ಯಕರ್ತ ಮುಜಾಮಿಲ್ ಪಾಷಾನ ಮೊಬೈಲ್ ಕರೆಗಳನ್ನು ಪರಿಶೀಲನೆ ನಡೆಸಿದಾಗ ಈ ಮಾಹಿತಿ ಬಹಿರಂಗವಾಗಿದೆ. ಒಂದು ನಂಬರ್‌ಗೆ ಪದೇ ಪದೇ ವಾಟ್ಸಪ್ ಕಾಲ್ ಹೋಗಿರುವುದು ಗೊತ್ತಾಗಿದೆ. ರಾತ್ರಿ 9:30 ರಿಂದ 11:30ರ ಅವಧಿಯಲ್ಲಿ ಒಟ್ಟು 11 ಬಾರಿ ಕರೆ ಹೋಗಿದೆ. ಆ ನಂಬರ್ ಯಾರದ್ದು ಎಂದು ಪರಿಶೀಲನೆ ನಡೆಸಿದಾಗ ಮಾಜಿ ಮೇಯರ್ ಪಿಎ ಅರುಣ್ ಎಂಬಾತನದ್ದು ಎಂಬುದು ಗೊತ್ತಾಗಿದೆ.
ಅರುಣ್ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ. ಈ ಗಲಭೆಯಲ್ಲಿ ಅರುಣ್ ಪಾತ್ರ ತಿಳಿಯುತ್ತಿದ್ದಂತೆ ಸಿಸಿಬಿ ಪೊಲೀಸರು ಸೋಮವಾರ ರಾತ್ರಿಯ ವಶಕ್ಕೆ ಪಡೆದಿದ್ದಾರೆ.ತನಿಖೆಯ ಪ್ರಮುಖ ಆರೋಪಿ ಮುಜಾಮಿಲ್ ಪಾಷಾನೊಂದಿಗೆ ಇನ್ನೊಬ್ಬ ವ್ಯಕ್ತಿಯೂ ಮಾತನಾಡಿದ್ದು, ಅದು ಸಂಪತ್ ರಾಜ್ ಧ್ವನಿಯಂತೆ ಹೋಲಿಕೆ ಹಿನ್ನೆಲೆ ಅವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.
ಸಂಪತ್ ರಾಜ್ ತನ್ನ ಫೋನ್ ಬಳಸದೇ ಅರುಣ್ ಫೋನ್ ಮೂಲಕ ಗಲಭೆಗೆ ಪ್ರಚೋದನೆ ನೀಡಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಸಂಪತ್ ರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಅರುಣ್ ಸ್ಫೋಟಕ ಮಾಹಿತಿಗಳನ್ನು ತಿಳಿಸಿದ್ದು, ಸಂಪತ್ ರಾಜ್ ಬಂಧನವಾಗುವ ಸಾಧ್ಯತೆ ಇದೆ.



