ಡಿವಿಜಿ ಸುದ್ದಿ, ಬೆಂಗಳೂರು: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿರುವ ನಡೆದಿರುವ ಗಲಭೆ ಪೂರ್ವ ಯೋಜಿತ ಮತ್ತು ಸಂಘಟಿತವಾಗಿದ್ದು, ಹಿಂದುಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ’ ಎಂದು ಸಿಟಿಜನ್ ಫಾರ್ ಡೆಮಾಕ್ರಸಿ ಸತ್ಯಶೋಧನಾ ಸಮಿತಿ ವರದಿ ನೀಡಿದೆ.
ಈ ಕುರಿತು 49 ಪುಟಗಳ ಸತ್ಯಶೋಧನಾ ವರದಿಯನ್ನು ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶುಕ್ರವಾರ ಸಲ್ಲಿಸಿತು.ನಿವೃತ್ತ ನ್ಯಾಯಾಧೀಶ ಶ್ರೀಕಾಂತ್ ಡಿ. ಬಬಲಾಡಿ ನೇತೃತ್ವದ ಈ ಸಮಿತಿಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ನಿವೃತ್ತ ಐಎಫ್‌ಎಸ್ ಅಧಿಕಾರಿಗಳಾದ ಡಾ.ರಾಜು, ಡಾ.ಪ್ರಕಾಶ್, ನಿವೃತ್ತ ಡಿಜಿಪಿ ಎಂ.ಎನ್.ಕೃಷ್ಣಮೂರ್ತಿ, ಪತ್ರಕರ್ತ ಆರ್.ಕೆ.ಮಟ್ಟೂ ಸಂತೋಷ್ ತಮ್ಮಯ್ಯ ಸಮಿತಿಯಲ್ಲಿದ್ದರು.
ನಮ್ಮ ಗುಪ್ತಚರ ವಿಭಾಗವನ್ನು ಬಲಪಡಿಸಬೇಕಾಗಿದೆ. ನಾವು ನಿಷ್ಪಕ್ಷವಾಗಿ ತನಿಖೆ ನಡೆಸಿ, ವರದಿ ಸಿದ್ಧಪಡಿಸಿದ್ದೇವೆ. ಸರ್ಕಾರ ನಿರ್ದಾಕ್ಷಿಣ್ಯವಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಮಿತಿಯ ಪರವಾಗಿ ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಹೇಳಿದ್ದಾರೆ.



