Connect with us

Dvgsuddi Kannada | online news portal | Kannada news online

ಡಿಜೆ ಹಳ್ಳಿ ಗಲಭೆಕೋರರಿಗೆ ಅಲ್ ಹಿಂದ್ ಉಗ್ರ ಸಂಘಟನೆ ನಂಟು

ಪ್ರಮುಖ ಸುದ್ದಿ

ಡಿಜೆ ಹಳ್ಳಿ ಗಲಭೆಕೋರರಿಗೆ ಅಲ್ ಹಿಂದ್ ಉಗ್ರ ಸಂಘಟನೆ ನಂಟು

ಡಿವಿಜಿ ಸುದ್ದಿ, ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀವುದ್ದಿನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತ ಅಲ್ ಹಿಂದ್ ಸಂಘಟನೆ ಜೊತೆ ನಂಟು ಹೊಂದಿದ್ದ  ಎಂಬುದು ತನಿಖೆಯಿಂದ ಗೊತ್ತಾಗಿದೆ.

ಡಿಜೆಹಳ್ಳಿ, ಕೆಜಿ ಹಳ್ಳಿ ಆ. 11 ರಾತ್ರಿ  ಗಲಭೆ ಸೃಷ್ಟಿಸುವಲ್ಲಿ ಸಮೀವುದ್ದೀನ್ ಪ್ರಮುಖನಾಗಿದ್ದ. ಸಿಸಿಬಿ ಪೊಲೀಸರು  ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿ ಸಮೀವುದ್ದೀನ್  ಸೆರೆಹಿಡಿದಿದ್ದಾರೆ. ಈ ಹಿಂದೆ  ಕಮರ್ಷಿಯಲ್ ಸ್ಟ್ರೀಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಬಿಜೆಪಿ ಮುಖಂಡ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿಗಳ ಜೊತೆಯಲ್ಲೂ ಸಮೀವುದ್ದೀನ್ ಒಡನಾಟ ಹೊಂದಿದ್ದ, ಅಲ್ ಹಿಂದ್ 8 ಉಗ್ ಸಂಘಟನೆ ಜೊತೆ  ಸಂಪರ್ಕದಲ್ಲಿದ್ದ ಎಂಬುದು ಸಿಸಿಬಿ ತನಿಖೆಯಿಂದ ಗೊತ್ತಾಗಿದೆ.

dj halli

ಭಾನುವಾರ ರಾತ್ರಿ ಬಂಧಿಸಿ  ನ್ಯಾಯಾಲಯಕ್ಕೆ ಹಾಜರುಪಡಿಸಿ,  ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗಿದೆ ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ‌ ತಿಳಿಸಿದರು. ರುದ್ರೇಶ್ ಹತ್ಯೆ ಪ್ರಕರಣದ ಆರೋಪಿಗಳು ಹಾಗೂ ಅಲ್ ಹಿಂದ್ ಸಂಘಟನೆ ಜೊತೆ ಸಮೀವುದ್ದೀನ್ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಕಲೆಹಾಕಬೇಕಿದೆ ಎಂದು ತಿಳಿಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top