ಡಿವಿಜಿ ಸುದ್ದಿ, ನವ ದೆಹಲಿ: ಅಕ್ರಮ ವರ್ಗಾವಣೆ ಆರೋಪದಡಿ ಬಂಧನವಾಗಿದ್ದ ಕಾಂಗ್ರೆಸ್ ಪ್ರಭಾವಿ ಮುಖಂಡ ಡಿ.ಕೆ ಶಿವಕುಮಾರ್ ಅವರಿಗೆ ಕೊನೆಗೂ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬರೋಬರಿ 48 ದಿನದ ನಂತರ ತೀಹಾರ್ ಜೈಲಿನಿಂದ ಮುಕ್ತಿ ಸಿಕ್ಕಿದೆ. ಜಾಮೀನು ನೀಡಲು ಜಾರಿ ನಿರ್ದೇಶನಾಲಯದ (ಇ.ಡಿ) ವಿಶೇಷ ನ್ಯಾಯಾಲಯ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.
25 ಲಕ್ಷ ಮೌಲ್ಯದ ಎರಡು ಬಾಂಡ್, ಪಾಸ್‌ಪೋರ್ಟ್ ಅನ್ನು ಒಪ್ಪಿಸಬೇಕು. ಅಗತ್ಯಬಿದ್ದಾಗ ವಿಚಾರಣೆಗೆ ಹಾಜರಾಗಬೇಕು ಎಂದು ನ್ಯಾಯಾಲಯ ಷರತ್ತಿನಲ್ಲಿ ಉಲ್ಲೇಖಿಸಿದೆ.