ಡಿವಿಜಿ ಸುದ್ದಿ, ನವದೆಹಲಿ : ನಾನು ಜೈಲಿನಲ್ಲಿದ್ದಾಗ ನನ್ನ ಪರ ಹೋರಾಟ ಮಾಡಿದ ಹಿತೈಷಿಗಳು, ಸ್ನೇಹಿತರು, ಬಂಧುಗಳು , ಅಭಿಮಾನಿಗಳು , ಕಾರ್ಯಕರ್ತರು, ನ್ಯಾಯವಾದಿಗಳು ಹಾಗೂ ಬಂಧನವಾಗದ ಸಂಕಟ, ಖುಷಿ, ಸಂತೋಷಪಟ್ಟವರೂ ಸೇರಿದಂತೆ ಎಲ್ಲರಿಗೂ ನನ್ನ ಧನ್ಯವಾದಗಳು…
ಇದು, ಕಾಂಗ್ರೆಸ್ ಪ್ರಭಾವಿ ಮುಖಂಡ, ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಿಹಾರ್ ಜೈಲಿನಿಂದ ಹೊರ ಬರುತ್ತಿದ್ದಂತೆ ಹಾಡಿದ ಮಾತುಗಳು.
ನಾನು ಜಾಮೀನು ಮಂಜೂರು ಮಾಡಬೇಕೆಂದು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದೆ, ನನ್ನ ಮನವಿಯನ್ನು ಪುರಸ್ಕರಿಸಿ ಕೋರ್ಟ್ ಪುರಸ್ಕರಿಸಿ ಜಾಮೀನು ಮಂಜೂರು ಮಾಡಿದೆ. ಮುಂದಿನ ದಿನಗಳಲ್ಲಿ ಕಾನೂನಿನ ರೀತಿಯಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.
ಈ ಮೂಲಕ ಡಿ.ಕೆ.ಶಿವಕುಮಾರ್ ವಿರೋಧಿ ಪಾಳ್ಯಕ್ಕೆ ಧನ್ಯವಾದಗಳ ಮೂಲಕವೇ ಉತ್ತರ ಕೊಟ್ಟಿದ್ದಾರೆ. ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಜಾರಿ ನಿರ್ದೇಶನಾಲಯದ ಬಂಧನದಲ್ಲಿದ್ದ ಡಿ.ಕೆ.ಶಿವಕುಮಾರ್ ಗೆ ಇಡಿ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿರಲಿಲ್ಲ. ಹೀಗಾಗಿ ದೆಹಲಿ ಹೈಕೋರ್ಟ್ ಮೇಲ್ಮನವಿ ಸಲ್ಲಿಸಿದ್ದರು.



