ಡಿವಿಜಿ ಸುದ್ದಿ, ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಏನು ಕಡಿದು ಕಟ್ಟೆ ಹಾಕಿದ್ದಾನೆಂದು ಅವರ ಫೋನ್ ಟ್ಯಾಪಿಂಗ್ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸರ್ಕಾರ ತನ್ನ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಆರೋಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಈ ರೀತಿ ತಿರುಗೇಟು ನೀಡಿದರು.

ಡಿ.ಕೆ. ಶಿವಕುಮಾರ್ ತಾನು ಒಬ್ಬ ಕಾಂಗ್ರೆಸ್ ಲೀಡರ್ ಎಂದು ತೋರಿಸಿಕೊಳ್ಳಲು ಪೋನ್ ಕದ್ದಾಲಿಕೆ ಮಾಡಿದ್ದಾರೆ. ಇಂತಹ ಆರೋಪಸ ಮೂಲಕ ಪ್ರಚಾರ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಅಷ್ಟೇ. ಅವರ ಫೋನ್ ಕದ್ದಾಲಿಕೆ ಪ್ರಶ್ನೆಯೇ ಬರುವುದಿಲ್ಲ ಎಂದರು.



