ಡಿವಿಜಿ ಸುದ್ದಿ, ಬೆಂಗಳೂರು: ಮಿಂಟೊ ಆಸ್ಪತ್ರೆ ವೈದ್ಯರ ಮೇಲೆ ನಡೆದಿರುವ ಹಲ್ಲೆ ಖಂಡಿಸಿ ರಾಜ್ಯದಾದ್ಯಂತ ಹೊರರೋಗಿ ವಿಭಾಗವನ್ನು (ಒಪಿಡಿ) ಬಂದ್ ಮಾಡಿ ಪ್ರತಿಭಟಿಸಲು ವೈದ್ಯರು ನಿರ್ಧರಿಸಿದ್ದಾರೆ.
ಹಲ್ಲೆ ಮಾಡಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಕ್ಷಮೆಯಾಚಿಸಬೇಕು ಹಾಗೂ ಅವರ ವಿರುದ್ಧ ಕಾನೂನಿನ ಅಡಿಯಲ್ಲಿ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಿರಿಯ ವೈದ್ಯರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಮುಂದುವರಿದಿದೆ.
ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ(ಐಎಂಎ) , ಫನಾ ಸೇರಿದಂತೆ ವಿವಿಧ ವೈದ್ಯಕೀಯ ಸಂಘಟನೆ ಬೆಂಬಲ ಸೂಚಿಸಿವೆ. ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಶನಿವಾರ ಬೆಳಿಗ್ಗೆ 6 ಗಂಟೆವರೆಗೂ ಒಪಿಡಿ ಬಂದ್ ಮಾಡಲು ಐಎಂಎ ಕರೆ ನೀಡಿದೆ. ತುರ್ತು ಸೇವೆಗಳು ಮಾತ್ರ ದೊರೆಯಲಿವೆ.