Connect with us

Dvgsuddi Kannada | online news portal | Kannada news online

ಡ್ರಗ್ಸ್  ವಿಚಾರದಲ್ಲಿ ಯಾವ ಪಕ್ಷದವರು ತಪ್ಪು ಮಾಡಿದ್ರೂ ತಪ್ಪೇ : ಸಚಿವ ಸೋಮಶೇಖರ್

ಪ್ರಮುಖ ಸುದ್ದಿ

ಡ್ರಗ್ಸ್  ವಿಚಾರದಲ್ಲಿ ಯಾವ ಪಕ್ಷದವರು ತಪ್ಪು ಮಾಡಿದ್ರೂ ತಪ್ಪೇ : ಸಚಿವ ಸೋಮಶೇಖರ್

ಮೈಸೂರು: ಡ್ರಗ್ಸ್ ವಿಚಾರದಲ್ಲಿ ಆ ಪಕ್ಷ, ಈ ಪಕ್ಷ ಅಂತ ಬರಲ್ಲ. ಯಾವ ಪಕ್ಷದವರು ತಪ್ಪು ಮಾಡಿದ್ರೂ  ತಪ್ಪೇ. ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳುತ್ತೇವೆ ಎಂದು  ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಗಿಣಿ ಅವರ ಬಂಧನದಿಂದ ಬಿಜೆಪಿಗೆ ಮುಜುಗರವಿಲ್ಲ. ಚಿತ್ರ ನಟ, ನಟಿಯರಿಗೆ ಸಮಾಜದಲ್ಲಿ ಜನಪ್ರಿಯತೆ ಇರುತ್ತೆ. ಅವರೇ ಡ್ರಗ್ಸ್ ಸೇವನೆ ಮಾಡಿದ್ರೆ ಸಮಾಜಕ್ಕೆ ಯಾವ ರೀತಿ ಸಂದೇಶ ರವಾನೆ ಆಗುತ್ತೆ. ಆದ್ದರಿಂದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ೆಂದು ತಿಳಿಸಿದರು.

ಪ್ರತಿ ದಿನ ಮುಖ್ಯಮಂತ್ರಿ  ಡ್ರಗ್ಸ್ ಪ್ರಕರಣದ ವಿವರಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಡ್ರಗ್ಸ್‌ನಿಂದ ಯುವ ಸಮೂಹ ಹಾಳಾಗುತ್ತೆ. ಆದ್ದರಿಂದ ಡ್ರಗ್ಸ್ ವಿಚಾರದಲ್ಲಿ ಎಷ್ಟೇ ಪ್ರಭಾವ ಇರಲಿ. ಯಾರ  ರಕ್ಷಣೆ ಪ್ರಶ್ನೆ ಇಲ್ಲ.

ಡ್ರಗ್ ಹಣದಲ್ಲಿ ಸರ್ಕಾರ ಬೀಳಿಸುವ ಸ್ಥಿತಿ ಬಿಜೆಪಿಗೆ ಬಂದಿಲ್ಲ. ಕುಮಾರಸ್ವಾಮಿ ಈಗ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ಆಗ ಅವರೇ ಅಧಿಕಾರದಲ್ಲಿದ್ದರು ಇದನ್ನು ಮಟ್ಟ ಹಾಕಬಹುದಾಗಿತ್ತು. ಆಗ ಸುಮ್ಮನೆ ಇದ್ದು ಈಗ ಮಾತನಾಡಿದರೆ ಹೇಗೆ? ಎಂದು ಪ್ರಶ್ನಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top