ಡಿವಿಜಿ ಸುದ್ದಿ, ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಹೊರ ಹಾಕಿದ್ದ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಸಿಸಿಬಿ ಅಧಿಕಾರಿಗಳು ಮುಂದೆ ಹಾಜರಾಗಿದ್ದಾರೆ.
ಸಿಸಿಬಿ ಕಚೇರಿಯ ಮುಂದೆ ಸುದ್ದಿಗಾರೊಂದಿಗೆ ಮಾತನಾಡಿದ ಇಂದ್ರಜಿತ್ ಲಂಕೇಶ್, ಸಿಸಿಬಿ ಅಧಿಕಾರಿಗಳು ಜೊತೆ ಮೊದಲು ಮಾತನಾಡುತ್ತೇನೆ. ನನಗೆ ಯಾರ ಒತ್ತಡವೂ ಇಲ್ಲ. ಯಾರಿಗೂ ಹೆದರಲ್ಲ. ನಾನು ಮಾಧ್ಯಮದವರನ್ನು ಗೌರವಿಸುವೆ. ವಿಚಾರಣೆ ನಂತರ ಮಾತನಾಡುತ್ತೇನೆ ಎಂದು ಹೇಳಿದರು.

ಪೊಲೀಸರು ಸೂಕ್ತ ಭದ್ರತೆ ನೀಡಿದರೆ, ಸ್ಯಾಂಡಲ್ ವುಡ್ ನ ಇನ್ನಷ್ಟು ಮಾಹಿತಿ ನೀಡುವುದಾಗಿ ಇಂದ್ರಜಿತ್ ಹೇಳಿದ್ದಾರೆ.ಇಂದ್ರಜಿತ್ ಲಂಕೇಶ್ ಹೇಳಿಕೆ ಬಳಿಕ ಸಿಸಿಬಿಯಿಂದ ನೋಟಿಸ್ ನೀಡಿದ್ದರು. ಇಂದು ಸಿಸಿಬಿ ಕಚೇರಿಗೆ ಹಾಜರಾಗಿ ಡ್ರಗ್ಸ್ ಜಾಲದ ಬಗ್ಗೆ ಮಾಹಿತಿ ನೀಡುವಂತೆ ಹಾಗೂ ತಮ್ಮ ಹೇಳಿಕೆಗೆ ಸ್ಪಷ್ಟೀಕರಣ ಕೊಡುವಂತೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು.



