ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ಸ್ ಮಾಫಿಯಾದಲ್ಲಿ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರಾಗಿಣಿಯನ್ನು ಮತ್ತೆ 5 ದಿನ ಸಿಸಿಬಿ ಪೊಲೀಸರ ಕಸ್ಟಡಿಗೆ ಕೋರ್ಟ್ ನೀಡಿದೆ. ಕೋರ್ಟ್ ಆದೇಶದ ಅನ್ವಯ ಶುಕ್ರವಾರದವರೆಗೂ ರಾಗಿಣಿ ಸಿಸಿಬಿ ಪೊಲೀಸರ ಕಸ್ಟಡಿಯಲ್ಲಿ ಇರಲಿದ್ದಾರೆ.
ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ 1ನೇ ಎಸಿಎಂಎಂ ನ್ಯಾಯಾಲಯ ಈ ಆದೇಶ ನೀಡಿದೆ. ಸಿಸಿಬಿ ಪರ ವಕೀಲರು ರಾಗಿಣಿ ಯನ್ನು ಹೆಚ್ಚಿನ ವಿಚಾರಣೆ ನಡೆಸಬೇಕಿದೆ. ಇನ್ನು 10 ದಿನ ನಮ್ಮ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿದ್ದರು. ಸಿಸಿಬಿ ವಕೀಲರ ವಾದವವನ್ನು ಆಲಿಸಿದ ಬಳಿಕ ನ್ಯಾ.ಜಗದೀಶ್ ಅವರು 5 ದಿನ ಕಸ್ಟಡಿಗೆ ನೀಡಿದರು. ಈ ವಿಚಾರಣೆ ವೇಳೆ ರಾಗಿಣಿ ಪರ ವಕೀಲರು ಹಾಜರಾಗಿರಲಿಲ್ಲ.

ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ನಟಿ ರಾಗಿಣಿ ಅಲರ್ಜಿ ಸಮಸ್ಯೆ ಕಾಣಿಸಿದೆ. ನನಗೆ ಅಲರ್ಜಿ ಸಮಸ್ಯೆಯಾಗುತ್ತಿದೆ. ಡಾಕ್ಟರ್ ಸೇವೆ ಅಗತ್ಯವಿದೆ ಎಂದು ರಾಗಿಣಿ ಪೊಲೀಸರ ಬಳಿ ಕೇಳಿಕೊಂಡಿದ್ದಾರೆ. ಈ ಹಿಂದೆ ರಾಗಿಣಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿತ್ತು.
ರಾಗಿಣಿಯ ಮನವಿಯಂತೆ ವೈದ್ಯರು ಆಗಮಿಸಿ ಚಿಕಿತ್ಸೆ ನೀಡಿದ್ದಾರೆ. ಐಷಾರಾಮಿ ಜೀವನ ನಡೆಸುತ್ತಿದ್ದವರು ಮಾನ್ಯ ಕೊಠಡಿಯಲ್ಲಿ ಕಾಲ ಕಳೆಯುತ್ತಿದ್ದಾರೆ. ಊಟ ಮತ್ತು ಎಣ್ಣೆಯಿಂದ ಅಲರ್ಜಿ ಸಮಸ್ಯೆ ಆಗಿರುವ ಸಾಧ್ಯತೆಯಿದೆ.



