Connect with us

Dvgsuddi Kannada | online news portal | Kannada news online

ಡ್ರಗ್ಸ್ ಮಾಫಿಯಾ: ನಟಿಯರಾದ ರಾಗಿಣಿ, ಸಂಜನಾ ಮತ್ತೆ 3 ದಿನ ಸಿಸಿಬಿ ವಶಕ್ಕೆ

ಪ್ರಮುಖ ಸುದ್ದಿ

ಡ್ರಗ್ಸ್ ಮಾಫಿಯಾ: ನಟಿಯರಾದ ರಾಗಿಣಿ, ಸಂಜನಾ ಮತ್ತೆ 3 ದಿನ ಸಿಸಿಬಿ ವಶಕ್ಕೆ

ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿರುವ ನಟಿಯರಾದ ರಾಗಿಣಿ ಹಾಗೂ ಸಂಜನಾಗೆ ಕೋರ್ಟ್ ಶಾಕ್ ನೀಡಿದ್ದು,  ಮತ್ತೆ ಮೂರು ದಿನ ಸಿಸಿಬಿ ಕಸ್ಟಡಿಗೆ  ಕೋರ್ಟ್ ಒಪ್ಪಿಸಿದೆ.

ಹೆಚ್ಚಿನ ವಿಚಾರಣಗಾಗಿ  ಸಿಸಿಬಿ ಪೊಲೀಸರು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ಕೋರ್ಟ್ ಗೆ ಮನವಿ ಮಾಡಿತ್ತು. ಆದರೆ, ಕೋರ್ಟ್ 3 ದಿನ ಸಿಸಿಬಿ ಕಸ್ಟಡಿಗೆ ಒಪ್ಪಿಸಿದೆ. ಈ ಮೂಲಕ ಇಬ್ಬರು ನಟಿಯರು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ವಿಚಾರಣೆ ಎದುರಿಸಬೇಕಾಗುತ್ತದೆ.

ಪೊಲೀಸ್ ಕಸ್ಟಡಿಗೆ ನೀಡುವ ಅವಶ್ಯಕತೆ ಇಲ್ಲ ಎಂದು ಇಬ್ಬರ ನಟಿಯರ ಪರ ವಕೀಲರು ವಾದ ಮಂಡಿಸಿದರು. ಆದರೆ, ಸಿಸಿಬಿ ಹೆಚ್ಚಿನ ವಿಚಾರಣೆಗೆ ಅಗತ್ಯವಿದೆ ವಾದ ಮಂಡಿಸಿದ್ದರಿಂದ ಕೋರ್ಟ್ ಮತ್ತೆ ಮೂರು ದಿನ ಸಿಸಿಬಿ ಕಸ್ಟಡಿಗೆ ನೀಡಿದೆ.

ಕಳೆದ 8 ದಿನದಿಂದ ನಟಿ ರಾಗಿಣಿ ಸಿಸಿಬಿ ಕಸ್ಟಡಿಯಲ್ಲಿದ್ದರು, ಇನ್ನು ನಟಿ  4 ದಿನದಿಂದ ಸಂಜನಾ ವಿಚಾಋಣೆ ಎದುರಿಸುತ್ತಿದ್ದರು. ಈಗ ಮತ್ತೆ ಮಹಿಳಾ ಸಾಂತ್ವನ ಕೇಂದ್ರದಲ್ಲಿಯೇ ಮೂರು ದಿನ ಕಳೆಯಬೇಕಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top