ಡಿವಿಜಿ ಸುದ್ದಿ,ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಬಂಧಿಸಿದಂತೆ ನಟಿ ಸಂಜನಾ ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ ಮಾಡಿ ಶಾಕ್ ಕೊಟ್ಟಿದ್ದ, ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ಸ್ ಪೆಕ್ಟರ್ ಅಂಜುಮಾಲಾ ನಾಯಕ್ ಅವರ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು. ಈಗ ಹೆಚ್ಚಿನ ವಿಚಾರಣೆಗೆ ಸಿಸಿಬಿ ಕಚೇರಿಗೆ ಕರೆದುಕೊಂಡು ಹೋಗಲಾಗುತ್ತಿದೆ.
ಸಂಜನಾ ಅವರ ಇಂದಿರಾ ನಗರ ನಿವಾಸಕ್ಕೆ ಬೆಳಗ್ಗೆ 6.30 ರಿಂದ ಸತತ 4.30 ಗಂಟೆ ವಿಚಾರಣೆ ನಂತರ ವಶಕ್ಕೆ ಪಡೆದಿದ್ದಾರೆ. ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿರುವ ರಾಹುಲ್ , ಪೃಥ್ವಿಕ್ ಶೆಟ್ಟಿ ಕೊಟ್ಟ ಮಾಹಿತಿ ಆಧಾರದ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ, ವಶಕ್ಕೆ ಪಡೆದಿದ್ದಾರೆ.



