ಡಿವಿಜಿ ಸುದ್ದಿ,ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಮತ್ತೊಂದು ಹೊಸ ತಿರುವು ಪಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.
ನಟಿಯ ಇಂದಿರಾನಗರ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಇನ್ಸ್‌ಪೆಕ್ಟರ್ ಪುನೀತ್ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಕಳೆದ ವಾರ ನಟಿ ರಾಗಿಣಿ ಮನೆ ಮೇಲೆ ದಾಳಿ ನಡೆಸಿ ಬಳಿಕ ಸಿಸಿಬಿ ಬಂಧಿಸಿತ್ತು. ಕಳೆದ ವಾರವೇ ಸಂಜನಾ ಹೆಸರು ಕೇಳಿ ಬಂದಿತ್ತು. ಆದರೆ ಸಿಸಿಬಿ ಎಫ್‌ಐಆರ್‌ನಲ್ಲಿ ಸಂಜನಾ ಹೆಸರು ಉಲ್ಲೇಖವಾಗಿರಲಿಲ್ಲ. ಆದರೆ ಈಗ ಆಪ್ತೆ ಪೃಥ್ವಿ ಶೆಟ್ಟಿ ನೀಡಿದ ಹೇಳಿಕೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಅವರು ಡ್ರಗ್ಸ್ ಪ್ರಕರಣದ ಲ್ಲಿ ಸಂಜನಾ ಸಹ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದರು. ಈ ವಿಚಾರದ ಬಗ್ಗೆ ಸಂಜನಾ,ಸಂಬರಗಿ ವಿರುದ್ಧ ಕಿಡಿಕಾರಿದ್ದರು.



