ಡಿವಿಜಿ ಸುದ್ದಿ, ಬೆಂಗಳೂರು: ಡ್ರಗ್ಸ್ ಪ್ರಕರಣ ಆರೋಪ ಎದುರಿಸುತ್ತಿರುವ ನಟಿ ಸಂಜನಾ 14 ದಿನ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಈ ಮೂಲಕ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ ಎರಡನೇ ನಟಿ. ಇದಕ್ಕೂ ಮೊದಲು ನಟಿ ರಾಗಿಣಿ ಜೈಲು ಸೇರಿದ್ದರು.
ಇಂದು ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ನ್ಯಾಯಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಸಂಜನಾ, ವೀರೇನ್ ಖನ್ನಾ, ರವಿಶಂಕರ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತು.

ಸಾಂತ್ವನ ಕೇಂದ್ರದಲ್ಲಿದ್ದ ಸಂಜನಾರನ್ನು ಬೆಳಗ್ಗೆ ಕೆಸಿ ಜನರಲ್ ಆಸ್ಪತ್ರಗೆ ಕರೆತಂದು ವೈದ್ಯಕೀಯ ಪರೀಕ್ಷೆ, ಕೊರೊನಾ ಟೆಸ್ಟ್ ನಡೆಸಲಾಯಿತು. ಬಳಿಕ ಸಾಂತ್ವನ ಕೇಂದ್ರಕ್ಕೆ ಕರೆತಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಇಂದಿನ ವಿಚಾರಣೆ ವೇಳೆ ಸಿಸಿಬಿ ಪೊಲೀಸರು ಕಸ್ಟಡಿಗೆ ನೀಡುವಂತೆ ಕೇಳಿರಲಿಲ್ಲ. ಹೀಗಾಗಿ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತು.
ಸೋಮವಾರ ನಟಿ ರಾಗಿಣಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಈ ವೇಳೆ ಸಿಸಿಬಿ ಪೊಲೀಸರು ಸಂಜನಾರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೇಳಿದ್ದರು. ಆದರೆ ಕೋರ್ಟ್ 2 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿತ್ತು.
ರಾಗಿಣಿ ಸೇರಿದಂತೆ ಸೇರಿದಂತೆ ಆರೋಪಿಗಳ ವಿರುದ್ಧ ನಾರ್ಕೊಟಿಕ್ ಡ್ರಗ್ಸ್ ಆ್ಯಂಡ್ ಸೈಕೊಟ್ರಾಫಿಕ್ ಸಬ್‌ಸ್ಟೆನ್ಸಸ್ (ಎನ್‍ಡಿಪಿಎಸ್) ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದೆ.



