ಡಿವಿಜಿ ಸುದ್ದಿ, ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನಟಿ ರಾಗಿಣಿ ದ್ವಿವೇದಿ, ಮಾಜಿ ಸಚಿವ ದಿ. ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವಾ ಸೇರಿದಂತೆ 12 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಸಿಸಿಬಿ ಎಸಿಪಿ ಗೌತಮ್ ನೀಡಿದ ಸ್ವಯಂಪ್ರೇರಿತ ದೂರಿನ ಆಧಾರದ ಮೇಲೆ ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಂಧಿತ ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ್ದ ಬಗ್ಗೆ ಸಾಕ್ಷಿ ಹಾಗೂ ಪುರಾವೆಗಳು ಸಿಕ್ಕಿರುವುದರಿಂದ ಗೌತಮ್ ದೂರು ನೀಡಿದ್ದರು. ವಾಟ್ಸಾಪ್ ಮೆಸೇಜ್‍ಗಳು ಹಾಗೂ ಪೆಡ್ಲರ್ ಗಳ ನೀಡಿರುವ ಮಾಹಿತಿ ಅನ್ವಯ ನಟಿ ರಾಗಿಣಿ ಅವರ ಕೈವಾಡದ ಬಗ್ಗೆ ಸಾಕ್ಷಿ ಲಭ್ಯವಾಗಿದ್ದು, ಡ್ರಗ್ ಡೀಲರ್ ಗಳ ಜೊತೆ ಒಡನಾಟ ಹೊಂದಿದ್ದಾರೆ. ಮಾಹಿತಿ ಖಚಿತವಾದ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಯಾರ ವಿರುದ್ಧ ಎಫ್ ಐಆರ್ ?
- ಶಿವಪ್ರಕಾಶ್ ಎ1
- ರಾಗಿಣಿ ಎ2
- ವಿರೇನ್ ಖನ್ನಾ ಎ3
- ಪ್ರಶಾಂತ್ ರಂಕಾ ಎ4
- ವೈಭವ್ ಜೈನ್ ಎ5
- ಆದಿತ್ಯ ಆಳ್ವಾ ಎ6
- ಲೂಮ್ ಪೆಪ್ಪರ್ ಎ7
- ಪ್ರಶಾಂತ್ ರಿಜು ಎ8
- ಅಶ್ವಿನ್ಎ9
- ಅಭಿಸ್ವಾಮಿಎ10
- ರಾಹುಲ್ ಎ11
- ವಿನಯ್ಎ12
ನಾರ್ಕೊಟಿಕ್ ಡ್ರಗ್ಸ್ ಆ್ಯಂಡ್ ಸೈಕೊಟ್ರಾಫಿಕ್ ಸಬ್‌ಸ್ಟೆನ್ಸಸ್ (ಎನ್‍ಡಿಪಿಎಸ್) ಆ್ಯಕ್ಟ್ ಸೆಕ್ಷನ್ 21, 21ಸಿ, 27ಎ, 27ಬಿ, 29, ಐಪಿಸಿ 120ಬಿ ಅಡಿ 12 ಮಂದಿ ವಿರುದ್ಧ ಕೇಸ್ ದಾಖಲಾಗಿದೆ. ಈಗ ರಾಗಿಣಿ, ವಿರೇನ್ ಖನ್ನಾ, ಶಿವಪ್ರಕಾಶ್, ಲೂಮ್ ಪೆಪ್ಪರ್ ಬಂಧಿಸಲಾಗಿದೆ. ಉಳಿದ ಆರೋಪಿಗಳು ಪರಾರಿಯಾಗಿದ್ದು ಅವರನ್ನು ಹುಡುಕುವ ಕಾರ್ಯ ನಡೆಯುತ್ತಿದೆ.



