ಡಿವಿಜಿ ಸುದ್ದಿ,ದಾವಣಗೆರೆ: ಡ್ರಗ್ಸ್ ಮಾಫಿಯಾದಲ್ಲಿ ಕೇವಲ ಸ್ಯಾಂಡಲ್‍ವುಡ್ ನಟ, ನಟಿಯರು ಮಾತ್ರವಲ್ಲ ಯುವ ಸಮುದಾಯ ಕೂಡ ಭಾಗಿಯಾಗಿದ್ದಾರೆ. ಈ ಮಾಫಿಯಾವನ್ನು ಸರ್ಕಾರ ಬೇರು ಸಮೇತ ಕಿತ್ತು ಹಾಕಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಅವರು, ತನಿಖೆ ಪ್ರಗತಿಯಲ್ಲಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ವಾಕ್ಮೀಕಿ ಸಮುದಾಯಕ್ಕೆ 7.5 ಮೀಸಲಾತಿ ನೀಡುವ ನ್ಯಾ.ನಾಗಮೋಹನ್ ದಾಸ್ ವರದಿಯನ್ನು ಸಿಎಂ ಯಡಿಯೂರಪ್ಪ ಜಾರಿ ಮಾಡುವ ವಿಶ್ವಾಸವಿದೆ. ವರದಿ ನೀಡಿ ಒಂದು ತಿಂಗಳು ಮಾತ್ರ ಆಗಿದೆ. ಅದರ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ಸಿಎಂ ಬಳಿ ನಿಯೋಗ ಹೋಗಲಿದ್ದೇವೆ. ಕೋವಿಡ್ ಇರುವುದರಿಂದ ತಡೆಹಿಡಿಯಲಾಗಿದೆ. ಅದಷ್ಟು ಬೇಗ ಜಾರಿಗೊಳಿಸಲು ಸಭೆ ನಡೆಸಲಾಗುತ್ತಿದೆ. ವಾಲ್ಮೀಕಿ ಸಮಾಜಕ್ಕೆ ಶೇಕಡಾ 7.5ರಷ್ಟು ಮೀಸಲಾತಿ ಸಿಗುತ್ತದೆ ಎಂಬ ನಂಬಿಕೆ ಇದೆ ಎಂದರು.



