ಡಿವಿಜಿ ಸುದ್ದಿ, ದಾವಣಗೆರೆ: ಡ್ರಗ್ಸ್ ಮಾಫಿಯಾ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ನೋಡಿಕೊಳ್ಳುತ್ತಿದ್ದಾರೆ. ನಮ್ಮ ಸರ್ಕಾರ ಡ್ರಗ್ಸ್ ಮಾಫಿಯಾ ವಿರುದ್ಧ ದೃಢ ಸಂಕಲ್ಪ ಮಾಡಿದ್ದು, ಯಾರೇ ಇದ್ದರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಯಾರೇ ಆಗಲಿ ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಹೀಗಾಗಿ ಯಾರೇ ತಪ್ಪಿಸ್ಥರು ಇರುತ್ತಾರೋ, ಅವರು ಶಿಕ್ಷೆ ಅನುಭವಿಸುತ್ತಾರೆ ಎಂದರು.
ಸರ್ಕಾರದಲ್ಲಿ ವಿಜಯೇಂದ್ರ ಯಾವುದೇ ರೀತಿಯ ಹಸ್ತಕ್ಷೇಪ ಮಾಡುತ್ತಿಲ್ಲ. ವಿಜಯೇಂದ್ರ ಅವರು ಅವರೇ ಆದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರತಿ ಪಕ್ಷಗಳು ಸರ್ಕಾರದ ವಿರುದ್ಧ ಏನಾದ್ರೂ ಆರೋಪ ಮಾಡಿ, ಗೊಂದಲ ಸೃಷ್ಠಿ ಮಾಡುವ ದೃಷ್ಠಿಯಿಂದ ಆರೋಪ ಮಾಡುತ್ತಿದ್ದಾರೆ ಎಂದರು.



