ಡಿವಿಜಿ ಸುದ್ದಿ, ಹುಬ್ಬಳ್ಳಿ: ಡ್ರಗ್ಸ್ ಪ್ರಕರಣದಲ್ಲಿ ಶಾಸಕ ಜಮೀರ್ ಅಹಮದ್ ವಿರುದ್ಧ ಸಾಕ್ಷ್ಯಗಳಿದ್ದರೆ, ಕ್ರಮ ಕೈಗೊಳ್ಳಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಜಮೀರ್ ಅಹ್ಮದ್ ಅವರೇ ಗಲ್ಲಿಗೆ ಹಾಕಲಿ ಜೊತೆಗೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಿ ಹೇಳಿದ್ದಾರೆ. ಡ್ರಗ್ ಪ್ರಕರಣದಲ್ಲಿ ಯಾರೇ ರಾಜಕೀಯ ನಾಯಕರಿದ್ದರೂ ಕ್ರಮ ಕೈಗೊಳ್ಳಲಿ ಎಂದು ತಿಳಿಸಿದ್ದಾರೆ.
ಡ್ರಗ್ಸ್ ಜಾಲದಲ್ಲಿ ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳಬೇಕು. ಡ್ರಗ್ಸ್ ಜಾಲದಲ್ಲಿ ದೊಡ್ಡವರು ಸಣ್ಣವರು ಅನ್ನೋದು ಬೇಡ. ಯಾರೇ ರಾಜಕೀಯ ನಾಯಕರು ಇದ್ದರೂ ಕ್ರಮ ಕೈಗೊಳ್ಳಲಿ ಎಂದರು.
ಸಾಕ್ಷ್ಯ ಸಿಕ್ಕರೆ ತನಿಖೆ ಮಾಡಲಿ ಅದನ್ನು ಬಿಟ್ಟು ರಾಜಕೀಯವಾಗಿ ಮುಗಿಸಲು ಆರೋಪ ಮಾಡಬಾರದು. ಪ್ರಶಾಂತ್ ಸಂಬರಗಿ ಹೇಳಿದರು ಎಂದು ತನಿಖೆ ಮಾಡೋಕೆ ಆಗುತ್ತಾ? ಸಾಕ್ಷ್ಯ ಇದ್ದರೆ ಯಾರನ್ನಾದರೂ ತನಿಖೆ ಮಾಡಲಿ ಎಂದು ತಿಳಿಸಿದರು.



