ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಕಾನೂನು ಇನ್ನಷ್ಟು ಕಠಿಣಗೊಳಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಕಾನೂನು ತಜ್ಞರ ಹಾಗೂ ರಾಷ್ಟ್ರೀಯ ಕಾನೂನು ಶಾಲೆಯ ಮುಖ್ಯಸ್ಥರ ಜೊತೆ ಮಾತನಾಡಿದ್ದೇನೆ. ಕಾನೂನು ಸಚಿವರ ಜೊತೆಗೂ ಸಮಲೋಚನೆ ನಡೆಸಿದ್ದೇವೆ ಎಂದರು.
ಈ ಜಾಲ ಪತ್ತೆ ಹಚ್ಚುವಲ್ಲಿ ಸಿಸಿಬಿ ಅಧಿಕಾರಿಗಳು ಶಿಸ್ತಿನ ಕಾರ್ಯಾಚರಣೆ ನಡೆಸಿದ್ದಾರೆ. ತನಿಖೆ ನಡೆಯುತ್ತಿದ್ದು, ಆರೋಪಿಗಳು ಎಷ್ಟೇ ದೊಡ್ಡವರಿರಲಿ ವಿಚಾರಣೆ ಶತಸಿದ್ಧ, ಈ ವಿಚಾರಣೆ ಸಾಕ್ಷ್ಯಗಳ ಆಧಾರಗಳ ಮೇಲೆ ನಡೆಯುತ್ತಿದೆ ಎಂದು ತಿಳಿಸಿದರು.



