ಡಿವಿಜಿ ಸುದ್ದಿ, ದಾವಣಗೆರೆ: ತೋಟಗಾರಿಕೆ ಇಲಾಖೆ ವತಿಯಿಂದ 2019-20 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ(ಪಿಎಂಕೆಎಸ್‍ವೈ) ಯೋಜನೆ ಕುರಿತು ಗ್ರಾಮಗಳಲ್ಲಿ ಜಾಗೃತಿ ಮೂಡಿಸುವ ವಾಹನಕ್ಕೆ ಜಿ.ಪಂ ಆವರಣದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು. ಶಾಸಕ ಪ್ರೊ.ಎನ್.ಲಿಂಗಣ್ಣ, ಜಿ.ಪಂ ಅಧ್ಯಕ್ಷೆ ಯಶೋಧಮ್ಮ ಮರುಳಸಿದ್ದಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಜಿ.ಪಂ ಸಿಇಓ ಪದ್ಮಾ ಬಸವಂತಪ್ಪ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್ ಉಪಸ್ಥಿತರಿದ್ದರು..