ನವದೆಹಲಿ: ದೆಹಲಿಯಲ್ಲಿ ಇಂದು ಸಂಜೆ ಲಘು ಭೂಕಂಪ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ದೆಹಲಿ-ಉತ್ತರ ಪ್ರದೇಶ ಗಡಿಯನ್ನು ಭೂಕಂಪದ ಕೇಂದ್ರಬಿಂದು ಎಂದು ಗುರುತಿಸಲಾಗಿದ್ದು, ರಿಕ್ಟರ್ ಮಾಪಕದಲ್ಲಿ 3.5 ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರವು ತಿಳಿಸಿದೆ.
#earthquake So far no damages reported across NCR and nearby https://t.co/EA7XWbhKEO
— ѕαtчα prαdhαnसत्य नारायण प्रधान ସତ୍ୟ ପ୍ରଧାନ (@satyaprad1) April 12, 2020
ದೆಹಲಿ ಮತ್ತು ನೆರೆಯ ನಗರಗಳಾದ ನೋಯ್ಡಾ, ಗಾಜಿಯಾಬಾದ್‍ನಲ್ಲಿ ಭೂಕಂಪನ ಉಂಟಾಗಿದೆ. ಯಾವುದೇ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ಹಾನಿ ಸಂಭವಿಸಿಲ್ಲ. ಲಾಕ್‍ಡೌನ್‍ನಿಂದ ಮನೆಯಲ್ಲೇ ಇರುವ ದೆಹಲಿಯ ಜನರು ಸಾಮಾಜಿಕ ಜಾಲತಾಣದಲ್ಲಿ ಭೂಕಂಪದ ಅನುಭವ ಹಂಚಿಕೊಂಡಿದ್ದಾರೆ.ಸಂಜೆ 5.45ಕ್ಕೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ದೇಶದಲ್ಲಿ ಕೊರೊನಾ ವೈರಸ್ ಭೀತಿಯ ನಡುವೆ ಭೂಕಂಪ ಸಂಭವಿಸಿದ್ದು, ದೆಹಲಿ ಜನರನ್ನು ಮತ್ತಷ್ಟು ಆತಂಕಕ್ಕೆ ಒಳಪಟ್ಟಿದ್ದಾರೆ.