Connect with us

Dvgsuddi Kannada | online news portal | Kannada news online

ಪ್ರವಾಹದ ಹೆಚ್ಚಿನ ಪರಿಹಾರಕ್ಕೆ ಮುಂದಿನ ವಾರ ದೆಹಲಿಗೆ: ಸಿಎಂ ಬಿ.ಎಸ್.ಯಡಿಯೂರಪ್ಪ

ಪ್ರಮುಖ ಸುದ್ದಿ

ಪ್ರವಾಹದ ಹೆಚ್ಚಿನ ಪರಿಹಾರಕ್ಕೆ ಮುಂದಿನ ವಾರ ದೆಹಲಿಗೆ: ಸಿಎಂ ಬಿ.ಎಸ್.ಯಡಿಯೂರಪ್ಪ

ಡಿವಿಜಿ ಸುದ್ದಿ, ಬೆಳಗಾವಿ: ಶೀಘ್ರ ಎಲ್ಲ ಶಾಸಕರ ಸಭೆ ಕರೆದು ಅತಿವೃಷ್ಟಿಯಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಲು ಯೋಜನೆ ರೂಪಿಸಲಾಗುವುದು. ಎಲ್ಲ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಲಾಗುವುದು. ಮುಂದಿನ ವಾರ‌ ದೆಹಲಿಗೆ ಹೋಗಿ ಹೆಚ್ವಿನ ಪರಿಹಾರ ಬಿಡುಗಡೆಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಅತಿವೃಷ್ಟಿಗೆ ಸಂಬಂಧಿಸಿದಂತೆ ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಂದು ನಡೆದ ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಕೋವಿಡ್-19  ಇರುವುದರಿಂದ ಎನ್.ಡಿ‌.ಆರ್.ಎಫ್. ಅನುದಾನದಡಿ ತುರ್ತು ಅಗತ್ಯವಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದರು.

kishana dam flood

ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಹ ನಿರ್ವಹಣೆ ಮತ್ತಿತರ ತುರ್ತು ಕೆಲಸಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 412 ಕೋಟಿ ರೂಪಾಯಿ ಅನುದಾನ ಲಭ್ಯವಿದೆ. ಹೆಚ್ಚಿನ ಹಣ ಬೇಕಾದರೆ ತಕ್ಷಣವೇ ಬಿಡುಗಡೆ ಮಾಡಲಾಗುವುದು.ಜಿಲ್ಲೆಯಲ್ಲಿ ಮನೆ ನಿರ್ಮಾಣಕ್ಕೆ 174 ಕೋಟಿ ರೂಪಾಯಿ ಇದೆ. ಇದಲ್ಲದೇ ಉಳಿದಿರುವ ಅನುದಾನದಲ್ಲಿ ರಸ್ತೆ ದುರಸ್ತಿ ಮತ್ತಿತರ ಕಾಮಗಾರಿ ಕೈಗೊಳ್ಳಲು ಸೂಚನೆ ನೀಡಿದರು.

ಇದೇ ರೀತಿ ಇತರೆ ಜಿಲ್ಲೆಗಳಲ್ಲಿ ಸಾಕಷ್ಟು ಹಣ ಲಭ್ಯವಿದೆ. ಮನೆ ಕಳೆದುಕೊಂಡಿರುವ ಬೆಳಗಾವಿಯ 44156 ಫಲಾನುಭವಿಗಳಿಗೆ 488 ಕೋಟಿ ಪರಿಹಾರ ಬಿಡುಗಡೆಯಾಗಿದೆ.ಜಿಲ್ಲೆಯಲ್ಲಿ ಆಗಿರುವ ಹಾನಿ ಮತ್ತು ಅಗತ್ಯವಿರುವ ಅನುದಾನದ ಮಾಹಿತಿಯನ್ನು ತಕ್ಷಣ ಸರ್ಕಾರಕ್ಕೆ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಗಾವಿ-ಧಾರವಾಡ ಸಮಸ್ಯೆಗಳನ್ನು ಗಮನಕ್ಕೆ ಬಂದಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.ಬೆಳಗಾವಿ-ಧಾರವಾಡ ಸಮಸ್ಯೆಗಳನ್ನು ಗಮನಕ್ಕೆ ಬಂದಿದ್ದು, ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಆಧರಿಸಿ ಮನೆ ಹಾಗೂ ಬೆಳೆ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು.

ಕಂದಾಯ ಸಚಿವರಾದ ಆರ್.ಅಶೋಕ, ಕಳೆದ ವರ್ಷದ ಮನೆಪರಿಹಾರ ನೀಡುವ ತಂತ್ರಾಂಶ ಪುನಃ ಆರಂಭಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಶೀಘ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ,ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಸೇರಿದಂತೆ ಶಾಸಕರು, ಆಧಿಕಾರಿಗಳು ಭಾಗಿಯಾಗಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top