ಡಿವಿಜಿ ಸುದ್ದಿ, ಬೆಂಗಳೂರು: ಅಂತಿಮ ವರ್ಷದ ಇಂಜಿನಿಯರ್, ಡಿಪ್ಲೊಮಾ ಹೊರತುಪಡಿಸಿ ಉಳಿದ ಸೆಮಿಷ್ಟರ್ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಸರ್ಕಾರ ರದ್ದುಗೊಳಿಸಿದೆ. ಪರೀಕ್ಷೆ ಇಲ್ಲದೆ ಪಾಸ್ ಮಾಡಲು ಸರ್ಕಾರ ನಿರ್ಧರಿಸಿದ್ದು, 1, 2 ಮತ್ತು 3 ವರ್ಷದ ಎಲ್ಲಾ ಸೆಮಿಸ್ಟರ್ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿದರು.
ರಾಜ್ಯದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂಜಿನಿಯರ್, ಡಿಪ್ಲೊಮಾ ವಿದ್ಯಾರ್ಥಿಗಳು ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಆದರೆ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಸೆಪ್ಟಂಬರ್ ನಲ್ಲಿ ಪರೀಕ್ಷೆ ನಡೆಸುವ ಚಿಂತನೆ ನಡೆದಿದೆ.
1, 2 ಮತ್ತು 3 ನೇ ವರ್ಷದ ಇಂಜಿನಿಯರ್ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳು ಹಿಂದಿನ ವರ್ಷ ತೆಗೆದುಕೊಂಡ ಅಂಕದ ಆಧಾರದ ಮೇಲೆ ಪಾಸ್ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.



