ಡಿವಿಜಿ ಸುದ್ದಿ, ಬೆಂಗಳೂರು: 7ನೇ ತರಗತಿಯವರೆಗಿನ ಆನ್‌ಲೈನ್ ಶಿಕ್ಷಣವನ್ನು ರದ್ದುಗೊಳಿಸಿ ಸರ್ಕಾರದ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಮಾಧುಸ್ವಾಮಿ, ಸಂಪುಟದಲ್ಲಿ ಆನ್‌ಲೈನ್ ತರಗತಿಯ ಬಗ್ಗೆ ಚರ್ಚೆ ನಡೆಯಿತು. 7ನೇ ತರಗತಿಯವರೆಗಿನ ಆನ್‌ಲೈನ್ ಶಿಕ್ಷಣವನ್ನು ರದ್ದು ಮಾಡುವಂತೆ ಸಚಿವರು ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಎಲ್ಲ ಮಾದರಿಯ ಪಠ್ಯ ಬೋಧಿಸುತ್ತಿರುವ ಶಾಲೆಗಳಲ್ಲಿ ನಡೆಯುತ್ತಿರುವ 7ನೇ ತರಗತಿವರೆಗೆ ಆನ್‌ಲೈನ್ ಶಿಕ್ಷಣವನ್ನು ರದ್ದುಗೊಳಿಸಲಾಗಿದೆ ಎಂದರು.
ಹೆಚ್ಚಿನ ಸಂಖ್ಯೆಯ ಮಕ್ಕಳು ಗ್ರಾಮೀಣ ಭಾಗದಲ್ಲಿದ್ದಾರೆ. ಆನ್ ಲೈನ್ ಶಿಕ್ಷಣ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗುವ 7 ತರಗತಿ ವರೆಗೆ ಆನ್ ಲೈನ್ ಶಿಕ್ಷಣ ಬೇಡ ಎಂದು ಸಂಪುಟ ಒಮ್ಮತದ ತೀರ್ಮಾನ ಮಾಡಿದೆ ಎಂದರು;.
8ನೇ ತರಗತಿ ಹಾಗೂ 9ನೇ ತರಗತಿ ಆನ್ ಲೈನ್ ಕ್ಲಾಸ್ ನಡೆಯುತ್ತಿದೆ. ಇದನ್ನೂ ನಿಲ್ಲಿಸಬೇಕೇ ಅಥವಾ ಬೇಡವೇ ಎನ್ನುವುದರ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.



