ಡಿವಿಜಿ ಸುದ್ದಿ, ಹಾವೇರಿ: ಹಾಸ್ಟೆಲ್ , ಕಾಲೇಜು ಆವರಣದಲ್ಲಿ ಮಾದಕವಸ್ತು ಪತ್ತೆಯಾದರೆ, ಆಯಾ ಶಿಕ್ಷಣ ಸಂಸ್ಥೆಗಳನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಶಾಲಾ–ಕಾಲೇಜು ಆರಂಭವಾದ ನಂತರ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಸಿಸಲಾಗುವುದು. ಬೆಂಗಳೂರುರಲ್ಲಿ ಸಿಸಿಬಿ ಪೊಲೀಸರು 200 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ. ಮಾದಕ ದ್ರವ್ಯ ಜಾಲದ ಬಗ್ಗೆ ಕೆಲವು ಸುಳಿವುಗಳು ಸಿಕ್ಕಿವೆ.
ಈ ಜಾಲದಲ್ಲಿ ವಿದೇಶಿಯರ ಪಾತ್ರ ಇರುವುದು ಪತ್ತೆಯಾಗಿದೆ. ದೊಡ್ಡ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸಿ, ಬೇರು ಸಮೇತ ಕಿತ್ತು ಹಾಕುತ್ತೇವೆ. ತಪ್ಪಿತಸ್ಥರು ಯಾರೇ ಆದರೂ, ಕ್ರಮ ನಿಶ್ಚಿತ ಎಂದು ಹೇಳಿದರು.



