ಡಿವಿಜಿ ಸುದ್ದಿ, ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೂತ್ರದ ಸೋಂಕಿನಿಂದ ಕಾಣಿಸಿಕೊಂಡಿರುವ ಜ್ವರ ಕಾಣಿಸಿಕೊಂಡಿದೆ. ಈ ಬಗ್ಗೆ ಆತಂಕಪಡುವ ಅವಶ್ಯಕತೆಯಿಲ್ಲ ಎಂದ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ರಾತ್ರಿ ಆಸ್ಪತ್ರೆಯಲ್ಲೇ ಸಿದ್ದರಾಮಯ್ಯ ಉಳಿದುಕೊಂಡಿದ್ದಾರೆ. ರಾತ್ರಿ 11:30ಕ್ಕೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಮಗ ಡಾ.ಯತೀಂದ್ರ ಅವರು ಸಿದ್ದರಾಮಯ್ಯನವರನ್ನು ನೋಡಿಕೊಳ್ಳುತ್ತಿದ್ದಾರೆ.
ಯಡಿಯೂರಪ್ಪ ಕೂಡ ಇದೇ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಆರಂಭದಲ್ಲಿ ಸಿಎಂ ಆರೋಗ್ಯ ವಿಚಾರಿಸಲೆಂದೇ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದಾರೆ ಎನ್ನಲಾಗಿತ್ತು. ನಂತರ ತಮ್ಮ ಆರೋಗ್ಯ ಆರೋಗ್ಯ ತಪಾಸಣೆಗೆ ಬಂದಿರುವ ವಿಚಾರ ತಿಳಿದಿದೆ.ಆಸ್ಪತ್ರೆಯಲ್ಲಿ ದಾಖಲಾಗುವ ಮುನ್ನ ಸಿಎಂ ಸಿದ್ದರಾಮಯ್ಯ ಸಿಎಂ ಆರೋಗ್ಯ ವಿಚಾರಿಸಿದರು. ಇಂದು ಸಿದ್ದರಾಮಯ್ಯನವರು ಕೊರೊನಾ ಪರೀಕ್ಷೆಗೆ ಒಳಗಾಗುವ ಸಾಧ್ಯತೆಯಿದೆ. ಹಾಲಿ, ಮಾಜಿ ಸಿಎಂಗಳು ಒಂದೇ ಆಸ್ಪತ್ರೆಯ ಸ್ಪೆಷಲ್ ವಾರ್ಡ್ನಲ್ಲಿದ್ದು ಆರೋಗ್ಯವಾಗಿದ್ದಾರೆ.



