ಡಿವಿಜಿ ಸುದ್ದಿ, ದಾವಣಗೆರೆ: ಅಕ್ರಮ ಕಳ್ಳಭಟ್ಟಿ ತಯಾರಿಕೆಯ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು, ತಾಲ್ಲೂಕಿನ ನಾಗರಕಟ್ಟೆ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಕಳ್ಳಭಟ್ಟಿ ವಶಪಡಿಸಿಕೊಂಡಿದ್ದಾರೆ.
ಗ್ರಾಮದ ಮೂರ್ತಿನಾಯ್ಕ್ ಅವರ ಮನೆಯಲ್ಲಿ 02 ಲೀಟರ್ ಹಾಗೂ ಗಂಗಾನಾಯ್ಕ್ ಅವರ ಮನೆಯಲ್ಲಿ 01 ಲೀಟರ್ ಕಳ್ಳಭಟ್ಟಿ ಸಾರಾಯಿ ವಶಪಡಿಸಿಕೊಳ್ಳಲಾಗಿದೆ. ಈ ಇಬ್ಬರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ನಡೆಸಿದ ದಾಳಿಯಲ್ಲಿ ಇಲಾಖೆಯ ಉಪ ವಿಭಾಗ ಹಾಗೂ ವಲಯ ಮತ್ತು ಜಿಲ್ಲಾ ವಿಚಕ್ಷಣಾ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು ಎಂದು ಇಲಾಖೆ ಡೆಪ್ಯೂಟಿ ಕಮೀಷನರ್ ತಿಳಿಸಿದ್ದಾರೆ.



