ಡಿವಿಜಿ ಸುದ್ದಿ, ದಾವಣಗೆರೆ: ರೈತರ ಪಂಪ್ ಸೆಟ್ ಗಳಿಗೆ ನಿರಂತರ 8 ಗಂಟೆ ವಿದ್ಯುತ್ ಪೂರೈಸುವಬೇಕೆಂದು ಆಗ್ರಹಿಸಿ ಸಂತೇಬೆನ್ನೂರು ಭಾಗದ ರೈತರು, ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ರೈತ ಮುಖಂಡ ತೇಜಸ್ವಿ ಪಟೇಲ್ ನೇತೃತ್ವದಲ್ಲಿ ಕಾರಿಗನೂರಿನಿಂದ ಬೈಕ್ ನಲ್ಲಿ ಮೆರವಣಿಗೆ ಮೂಲಕ ಆಗಮಿಸಿ, ಬೆಸ್ಕಾಂ ಕಚೇರಿ ಮುತ್ತಿಗೆ ಹಾಕಿದರು. ಭದ್ರಾ ನಾಲೆಯಿಂದ ನೀರು ಹರಿಸುವಾಗ ನಿರಂತರ ವಿದ್ಯುತ್ ನೀಡುವುದಾಗಿ ಬೆಸ್ಕಾಂ ಭರವಸೆ ನೀಡುತ್ತು. ಆದರೆ, ಈಗಿರುವ 7 ತಾಸು ವಿದ್ಯುತ್ ನೀಡಲು ಮೂರು ಸಲ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ಇದರಿಂದ ನಾವು ಬೆಳೆದ ಬೆಳೆಗಳು ಹಾಳಾಗುತ್ತಿವೆ. ಆದ್ದರಿಂದ ಕನಿಷ್ಠ 8 ಗಂಟೆ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿದರು.
ಮಹಾನಗರಗಳಿಗೆ ಮಾತ್ರ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುವ ಬೆಸ್ಕಾಂ. ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಇನ್ನು ಕೆಲವು ದಿನಗಳಲ್ಲಿ ವಿದ್ಯಾರ್ಥಿಗಳ ಪರೀಕ್ಷೆಗಳು ಆರಂಭವಾಗಲಿದ್ದು, ರಾತ್ರಿ ವೇಳೆ ವಿದ್ಯುತ್ ತಗೆಯುವುದರಿಂದ ತೊಂದರೆ ಆಗುತ್ತದೆ. ಹೀಗಾಗಿ ಪಂಪ್ ಸೆಟ್ ಗಳಿಗೆ ಕನಿಷ್ಠ 8 ತಾಸು 3 ಪೇಸ್ ವಿದ್ಯುತ್ ನೀಡಬೇಕು ಜೊತೆಗೆ ಪರೀಕ್ಷೆ ಸಯದಲ್ಲಿ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ ಮಾಡಬಾದರು ಎಂದು ರೈತರ ಮುಖಂಡ ತೇಜಸ್ವಿ ಪಾಟೀಲ್ ಒತ್ತಾಯಿಸಿದರು.
ಈಗಾಗಲೇ ರೈತರು ಬೆಲೆ ಕುಸಿತದಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರಿಗೆ ಸರಿಯಾಗಿ ವಿದ್ಯುತ್ ಪೈರೈಕೆ ಮಾಡದ ಹೋದಲ್ಲಿ ಪ್ರತಿ ದಿನದ ಧರಣಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಬಲ್ಲೂರು ರವಿಕುಮಾರ್, ನಾಗರಾಜು,ಕುಬೇರಪ್ಪ, ಆನಂದ್, ಗುರುಬಸಪ್ಪ, ಶಾಂತ ವೀರಪ್ಪ ಸೇರಿದಂತೆ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.