Connect with us

Dvg Suddi-Kannada News

ಮಾಜಿ ಕ್ರಿಕೆಟರ್ ಅಜರುದ್ಧೀನ್ ವಿರುದ್ಧ 20.96 ಲಕ್ಷ ವಂಚನೆ ಕೇಸ್

ಪ್ರಮುಖ ಸುದ್ದಿ

ಮಾಜಿ ಕ್ರಿಕೆಟರ್ ಅಜರುದ್ಧೀನ್ ವಿರುದ್ಧ 20.96 ಲಕ್ಷ ವಂಚನೆ ಕೇಸ್

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅಜರುದ್ದೀನ್ ಮತ್ತು ಅವರ ಪಿಎ ವಿರುದ್ಧ 20.96 ಲಕ್ಷ  ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಟ್ರಾವೆಲ್ ಏಜೆಂಟ್ ಮೊಹಮ್ಮದ್ ಶಹಾಬ್ ಎಂಬುವರು  ಕೇಸ್ ದಾಖಲಿಸಿದ್ದಾರೆ.

ಸಿಟಿ ಚೌಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಜರುದ್ದೀನ್ ಅವರ ಪಿಎ ಮುಜಿಬ್ ಖಾನ್ ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ಅಜರುದ್ದೀನ್ ಹಾಗೂ ಕೆಲವರ ಹೆಸರಿನಲ್ಲಿ 20.96 ಲಕ್ಷ ಮೊತ್ತದ ಹಲವು ಇಂಟೆರ್ ನ್ಯಾಷನಲ್ ಟಿಕೆಟ್ ಬುಕ್ ಮಾಡಿದ್ದರು. ಟಿಕೆಟ್ ಬುಕ್ ಮಾಡಿದ ಬಳಿಕ ಆನ್‍ಲೈನ್‍ನಲ್ಲಿ ಪೇಮೆಂಟ್ ಮಾಡುವುದಾಗಿ ಹೇಳುತ್ತಿದ್ದರು. ಆದರೆ ಇದುವರೆಗೂ ಯಾವುದೇ ಹಣ ನನಗೆ ಸಿಕ್ಕಿಲ್ಲ ಎಂದು ಡ್ಯಾನೀಶ್ ಟೂರ್ಸ್ ಆ್ಯಂಡ್ ಟ್ರಾವೆಲ್ಸ್ ಏಜೆನ್ಸಿ ಮಾಲೀಕ ಮೊಹಮ್ಮದ್ ಶಾಹಬ್  ದೂರಿನಲ್ಲಿ ಉಲ್ಲೇಖಿಸಿದ್ಧಾರೆ.

ಹಾಣ ಕೇಳಿದರೆ,  ಮುಜಿಬ್ ಸಹದ್ಯೋಗಿ ಸುದೇಶ್ ಅವಕ್ಕಲ್ 10.6 ಲಕ್ಷ ರೂ. ವರ್ಗಾಯಿಸಿದ್ದೇನೆ ಎಂದು ಇಮೇಲ್ ಮಾಡಿದ್ದರು. ಆದರೆ ಇದುವರೆಗೂ ಯಾವುದೇ ಹಣ ಸಿಗಲಿಲ್ಲ. ನವೆಂಬರ್ 24ರಂದು ಸುದೇಶ್ ಚೆಕ್ ನೀಡುತ್ತಿರುವ ಫೋಟೋವನ್ನು ಶಹಾಬ್‍ಗೆ ಕಳುಹಿಸಿದ್ದರು.ನನಗೆ ಇದುವರೆಗೂ ವುದೇ ಚೆಕ್ ಸಿಕ್ಕಿಲ್ಲ ಎಂದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅಜರುದ್ದೀನ್ ಈ ಆರೋಪ ತಳ್ಳಿ ಹಾಕಿದ್ದು, ಅಲ್ಲದೆ ಮೊಹಮ್ಮದ್ ಅವರ ವಿರುದ್ಧ ಕಾನೂನು ರೀತಿಯಲ್ಲಿ ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ.

ಸಿಟಿ ಚೌಕ್ ಪೊಲೀಸ್ ಠಾಣೆಯಲ್ಲಿ ಅಜುರುದ್ದೀನ್, ಮುಜಿಬ್ ಖಾನ್ ಹಾಗೂ ಸುದೇಶ್ ಅವಕ್ಕಲ್ ವಿರುದ್ಧ ಐಪಿಸಿ ಸೆಕ್ಷನ್ 420(ವಂಚನೆ), 406(ನಂಬಿಕೆ ದ್ರೋಹ) ಹಾಗೂ 34(ಒಂದೇ ಉದ್ದೇಶದಿಂದ ಅನೇಕ ವ್ಯಕ್ತಿಗಳಿಂದ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top