Connect with us

Dvgsuddi Kannada | online news portal | Kannada news online

ದಾವಣಗೆರೆ ಬೇಕರಿಯಲ್ಲಿ ಸಿಲಿಂಡರ್ ಸ್ಫೋಟ

ದಾವಣಗೆರೆ

ದಾವಣಗೆರೆ ಬೇಕರಿಯಲ್ಲಿ ಸಿಲಿಂಡರ್ ಸ್ಫೋಟ

ಡಿವಿಜಿ ಸುದ್ದಿ, ದಾವಣಗೆರೆ:  ಸಿಲಿಂಡರ್ ಸ್ಫೋಟ ಸಂಭವಿಸಿ ಓರ್ವ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ  ದಾವಣಗೆರೆಯಲ್ಲಿ ನಡೆದಿದೆ.

ನಗರದ ಎವಿಕೆ ಕಾಲೇಜ್ ರಸ್ತೆಯ ಆಹಾರ್ ಕೇಕ್ ಬೇಕರಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ ನಡೆದಿದೆ. ಬೇಕರಿಯ ಮೊದಲ ಮಹಡಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ನೋಡ ನೋಡುತ್ತಿದ್ದಂತೆ ಇಡೀ ಬೆಂಕಿ ಇಡೀ ಬೇಕರಿ ಆವರಿಸಿಕೊಂಡಿದೆ.  ಬೆಂಕಿ  ಅವಘಡದಿಂದ ಕೆಲ ಹೊತ್ತು ಎವಿಕೆ ಕಾಲೇಜು ರಸ್ತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಎರಡು ಅಗ್ನಿ ಶಾಮಕ ವಾಹನಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲಾಯಿತು.

ಘಟನೆಯಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯಗೊಂಡಿದ್ದಾರೆ. ಬೇಕರಿಯಲ್ಲಿ ಕೆಲಸ ಮಾಡುತ್ತಿರುವರಿಗೆ ಸಣ್ಣ ಗಾಯಾಗಳಾಗಿವೆ.  ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top