ಡಿವಿಜಿಸುದ್ದಿ.ಕಾಂ, ಚಿಕ್ಕಮಗಳೂರು: ರಾಜ್ಯದಲ್ಲಿ ನೆರೆ ಹಾವಳಿಯಿಂದ 32 ಸಾವಿರ ಕೋಟಿ ನಷ್ಟವಾಗಿದ್ದು, ಕೇಂದ್ರ ಸರ್ಕಾರ ಕೇವಲ 1,200 ಕೋಟಿ ಪರಿಹಾರ ನೀಡಿರುವುದು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ಇದೊಂದು ಬೇಜಾವಾಬ್ದಾರಿ ಮತ್ತು ಜನ ವಿರೋಧಿ ಸರ್ಕಾರ. ನೆರೆ ಪರಿಹಾರ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಬೇಕಾದರೆ, ಈ ಸರ್ಕಾರವನ್ನು ಕಿತ್ತು ಎಸೆಯಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಎಸ್ ಕೆ ಮೇಗಲ್ ಗ್ರಾಮದ ಚಂದ್ರೇಗೌಡ, ಕಾರಗದ್ದೆ ಗ್ರಾಮದ ಚನ್ನಪ್ಪಗೌಡ ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಮೃತ ರೈತರ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ 50 ಸಾವಿರ ಸಹಾಯಧನ ನೀಡಿದರು.



