ಡಿವಿಜಿ ಸುದ್ದಿ,ಗದಗ: ಇಂದು ಬೆಳ್ಳಂ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿರುವ ಘಟನೆ ಗದಗನಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ನೀರು ಸರಬರಾಜು ಮಂಡಳಿಯ ಎಇಇ ಹನುಮಂತ ಪ್ರಭಣ್ಣವರ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ರಾಜೀವ್ ಗಾಂಧಿ ನಗರದ ಮನೆ ಮೇಲೆ ಎಸಿಬಿ ಡಿವೈಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
ಭ್ರಷ್ಟಾಚಾರ ದೂರಿನ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಮಹತ್ವದ ದಾಖಲೆ ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಎಇಇ ಹನುಮಂತ ಮನೆ ಮೇಲಿನ ದಾಳಿ ವೇಳೆ ಸುಮಾರು ಲಕ್ಷಾಂತರ ರೂಪಾಯಿ ಹಣ ಮತ್ತು ಚಿನ್ನ, ಬೆಳ್ಳಿ ವಶಪಡಿಸಿಕೊಂಡಿದ್ದಾರೆ.
ಗದಗ ಮತ್ತು ಧಾರವಾಡ ಜಿಲ್ಲೆಯಲ್ಲಿ ಇವರ ಹೆಸರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸುಮಾರು 11 ಸೈಟ್‍ಗಳು ಇರುವುದು ಅಧಿಕಾರಿಗಳ ದಾಳಿ ವೇಳೆ ಗೊತ್ತಾಗಿದೆ. ಕಡತಗಳ ಪರಿಶೀಲನೆ ಮುಂದುವರಿದಿದೆ.



