Connect with us

Dvg Suddi-Kannada News

ಧಾರಾವಾಹಿ ಶೂಟಿಂಗ್ ಗೆ ಸರ್ಕಾರ ಅನುಮತಿ: ಸಚಿವ ಆರ್.ಅಶೋಕ್ 

ಪ್ರಮುಖ ಸುದ್ದಿ

ಧಾರಾವಾಹಿ ಶೂಟಿಂಗ್ ಗೆ ಸರ್ಕಾರ ಅನುಮತಿ: ಸಚಿವ ಆರ್.ಅಶೋಕ್ 

ಡಿವಿಜಿ ಸುದ್ದಿ, ಬೆಂಗಳೂರು: ಲಾಕ್‍ಡೌನ್ ನಿಂದಾಗಿ ಸ್ಥಗಿತಗೊಂಡಿರುವ ಕಿರು ತೆರೆಯ ಧಾರಾವಾಹಿ ಶೂಟಿಂಗ್‍ಗಳಿಗೆ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.

ಧಾರಾವಾಹಿಯಿಂದ ಆರು ಸಾವಿರಕ್ಕೂ ಹೆಚ್ಚು ಕಾರ್ಮಿಕರು ಅವಲಂಬಿತರಾಗಿದ್ದಾರೆ. ಹೀಗಾಗಿ  ಸರ್ಕಾರ ನಿಯಮಗಳ ಅನ್ವಯ ಮನೆಯ ಒಳಗೆ ನಡೆಯುವ ಶೂಟಿಂಗ್‍ಗಳಿಗೆ ಮಾತ್ರ ಅವಕಾಶ ನೀಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್  ತಿಳಿಸಿದರು.

ಕೊರೊನಾ ಸಂಬಂಧ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಶೂಟಿಂಗ್ ಮಾಡಲು ಅನುಮತಿ ನೀಡಲಾಗಿದೆ. ಆದರೆ ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ಇಲ್ಲ. ಅಲ್ಲದೇ ಸಿನಿಮಾ ಹಾಗೂ ರಿಯಾಲಿಟಿ ಶೋಗಳ ಶೂಟಿಂಗ್‍ಗೆ ಅನುಮತಿ ನೀಡಿಲ್ಲ. ಮನೆಯ ಒಳಭಾಗದಲ್ಲಿ ನಡೆಸಲಾಗುವ ಧಾರಾವಾಹಿ ಶೂಟಿಂಗ್‍ಗೆ ಮಾತ್ರ ಅನುಮತಿ ನೀಡಲಾಗಿದೆ ಎಂದರು.

ಮೇ 11ರಿಂದ ಧಾರಾವಾಹಿ ಹಾಗೂ ರಿಯಾಲಿಟಿ ಶೋ ಚಿತ್ರೀಕರಣಕ್ಕೆ ಅನುವು ಮಾಡಿಕೊಂಡುವಂತೆ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ.ಶಿವಕುಮಾರ್ ಭಾನುವಾರ ಸಿಎಂ ಬಳಿ ಮನವಿ ಮಾಡಿಕೊಂಡಿದ್ದರು.

ಕೊರೊನಾ ವೈರಸ್ ನಿಂದಾಗಿ ಮಾರ್ಚ್ 19ರಿಂದ ಕಿರುತೆರೆಯ ಶೂಟಿಂಗ್‍ಗೆ ಬ್ರೇಕ್ ಬಿದ್ದಿತ್ತು.  ರಾಜ್ಯ ಸರ್ಕಾರದ ಶೂಟಿಂಗ್ ಪ್ರಾರಂಭಿಸಲು ಅನುಮತಿ ಕೊಡಿ ಎಂದು ಎಸ್.ವಿ.ಶಿವಕುಮಾರ್ ಸಿಎಂ ಯಡಿಯೂರಪ್ಪ ಮುಂದೆ ಬೇಡಿಕೆ ಇಟ್ಟಿದ್ದರು.

ಲಾಕ್‍ಡೌನ್ ಸಡಿಲಿಕೆಯಾಗಿದ್ದು, ನಮ್ಮ ಕ್ಷೇತ್ರಕ್ಕೂ ಸಡಿಲಿಕೆ ಮಾಡಬೇಕು. ಧಾರಾವಾಹಿ ಮತ್ತು ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ಅನುಮತಿ ನೀಡಿದರೆ ಒಳ್ಳೆಯದಾಗುತ್ತದೆ. ಅಂದಾಜು 120 ಧಾರಾವಾಹಿಗಳ ಶೂಟಿಂಗ್ ನಡೆಯುತ್ತಿದ್ದು, 20 ಸಾವಿರ ಕಲಾವಿದರು, ತಂತ್ರಜ್ಞರು ಇದರ ಮೇಲೆ ಅವಲಂಬಿತರಾಗಿದ್ದಾರೆ ಎಂದು ಮನವಿ ಮಾಡಿದ್ದರು.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top