Connect with us

Dvg Suddi-Kannada News

KPSC ಮೂಲಕ 1279 SDA ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

KPSC ಮೂಲಕ 1279 SDA ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಡಿವಿಜಿ ಸುದ್ದಿ, ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ಮೂಲಕ   ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ  1080, ಕಲ್ಯಾಣ ಕರ್ನಾಟಕದಲ್ಲಿ 199  ಕಿರಿಯ ಸಹಾಯಕ ಹಾಗೂ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ  ಪಡೆದಿರುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ರಾಜ್ಯ ಸರ್ಕಾರದ 25 ವಿವಿಧ ಇಲಾಖೆಗಳಲ್ಲಿ 1080 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ199 ಹುದ್ದೆ ಮೀಸಲಾತಿ ನಿಗದಿ ಮಾಡಿದ್ದು, ಒಟ್ಟು  1279 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಕರ್ನಾಟಕ ಲೋಕಸೇವಾ ಆಯೋಗದ ವೆಬ್‌ಸೈಟ್‌ಗೆ www.kpsc.kar.nic.in ಲಾಗಿನ್‌ ಆಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 09 ಕೊನೆಯದಿನವಾಗಿದ್ದು, ಜೂನ್ 07 ರಂದು ಪರೀಕ್ಷೆ ನಡೆಯಲಿದೆ.

ಹುದ್ದೆಗಳ ವಿವರ

ಹುದ್ದೆಗಳ ಸಂಖ್ಯೆ1279

ವಿದ್ಯಾರ್ಹತೆಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ

ವೇತನ ಶ್ರೇಣಿ: 21,400 -42,000 ಸೇರಿದಂತೆ ಇತರೆ ಭತ್ಯೆ

ವಯಸ್ಸು

ಕನಿಷ್ಠ 18 ವರ್ಷಗಳಾಗಿರಬೇಕು.

ವಯೋಮಿತಿ ಸಡಿಲಿಕೆ

ಸಾಮಾನ್ಯ ವರ್ಗದ ಅಭ್ಯರ್ಥಿಗಳು– ಗರಿಷ್ಠ 35 ವರ್ಷ

ಹಿಂದುಳಿದ ವರ್ಗದ ಅಭ್ಯರ್ಥಿಗಳು– ಗರಿಷ್ಠ 38 ವರ್ಷ

ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು– 40 ವರ್ಷ

ಅರ್ಜಿ ಶುಲ್ಕ

ಸಾಮಾನ್ಯ ವರ್ಗದ ಅಭ್ಯರ್ಥಿಗಳು–600

ಹಿಂದುಳಿದ ವರ್ಗದ ಅಭ್ಯರ್ಥಿಗಳು–300

ಮಾಜಿ ಸೈನಿಕರು–50

ನೇಮಕಾತಿ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರ ಮೆರಿಟ್‌ ಲಿಸ್ಟ್‌ ತಯಾರಿಸಿ ಮೀಸಲಾತಿ ಅನ್ವಯ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ಅರ್ಜಿ ಸಲ್ಲಿಸಬಹುದಾದ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ವೆಬ್‌ಸೈಟ್‌ಗೆ www.kpsc.kar.nic.in ಲಾಗಿನ್‌ ಆಗಿ ಆನ್‌ಲೈನ್ ಮೂಲಕ ಅರ್ಜಿ ಭರ್ತಿ ಮಾಡಬೇಕು.

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 09-04-2020

ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ : 07-06-2020

ಕೆಪಿಎಸ್‌ಸಿ ವೆಬ್‌ಸೈಟ್‌: http://www.kpsc.kar.nic.in

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top