ಡಿವಿಜಿ ಸುದ್ದಿ, ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ರಾಜ್ಯದ 275 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಈ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ರಾಜ್ಯ ಸರ್ಕಾರ, ಮೊದಲ ಹಂತದಲ್ಲಿ 275 ಪಬ್ಲಿಕ್ ಶಾಲೆಗಳಲ್ಲಿ ಪ್ರಾರಂಭಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದರು.
ಶಾಲೆ ಆರಂಭಕ್ಕೆ ಅಗತ್ಯವಿರುವ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಡಿಎಡ್ ಆದವರಿಗೆ ಮಾಂಟೆಸ್ಸರಿ ತರಬೇತಿ ನೀಡಲಾಗುತ್ತಿದೆ. ಶಿಕ್ಷಕರಿಗೆ 7,500 ಮತ್ತು ಆಯಾಗಳಿಗೆ 5,000 ಗೌರವ ಸಂಭಾವನೆ ನೀಡಲಾಗುವುದು ಎಂದು ತಿಳಿಸಿದರು.



